ದಿನದ ಸುದ್ದಿ
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”
ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”
ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243