ದಿನದ ಸುದ್ದಿ
ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಹೊಸ ಶಿಕ್ಷಣ ನೀತಿ ಸಹಕಾರಿ : ಸಚಿವ ಕೆ.ಸುಧಾಕರ್
ಸುದ್ದಿದಿನ ಡೆಸ್ಕ್ : ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳು ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದ್ದು, ಮೂರು ವರ್ಷಗಳ ವ್ಯಾಪಕ ಚರ್ಚೆಗಳ ನಂತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಹಾಗೂ ಚಿಕ್ಕಬಳ್ಳಾಪುರ ಜಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯಾವುದೇ ಸಂದರ್ಭದಲ್ಲೂ ಪದವಿ ಹಂತದಲ್ಲಿ ತಮ್ಮ ಆಸಕ್ತಿಯ ವಿಷಯಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶಗಳಿವೆ. ಯುವ ಸಮುದಾಯ ಅಂತಾರಾಷ್ಟ್ರೀಯ ಗುಣಮಟ್ಟದ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಬೇಕು ಎಂಬ ಪ್ರಧಾನಿ ಮೋದಿ ಅವರ ದೃಷ್ಠಿಕೋನದಂತೆ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ ಎಂದರು.
ವಿದ್ಯಾರ್ಥಿಗಳು, ಪರೀಕ್ಷೆ ಬರೆಯುವ ಮುನ್ನ ಅವರೊಂದಿಗೆ ಸಂವಾದ ನಡೆಸುವ ಮೂಲಕ ಪ್ರತಿ ವರ್ಷ ಧೈರ್ಯತುಂಬುವ ಕೆಲಸ ಮಾಡುತ್ತಿರುವ ದೇಶದ ಪ್ರಥಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243