Connect with us

ದಿನದ ಸುದ್ದಿ

ಹೊಸ ರಾಷ್ಟ್ರೀಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನಿದೆ..?

Published

on

ಸುದ್ದಿದಿನ,ನವದೆಹಲಿ: ಇನ್ನು ಮುಂದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಭಾರತದಲ್ಲಿ ಜಾರಿಯಾಗಲಿದೆ. ಈಗ ಇರುವ 10+2 ಶಿಕ್ಷಣ ವ್ಯವಸ್ಥೆ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ಸಾರ್ವಜನಿಕರಿಂದ ಸಲಹೆಗಳನ್ನು ಪಡೆದು ಈಗ ಈ ಹೊಸ ಎನ್‌ಇಪಿಗೆ ಕೇಂದ್ರ ಕ್ಯಾಬಿನೆಟ್‌ ಒಪ್ಪಿಗೆ ನೀಡಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ ಹೊಸ ನೀತಿಯ ವಿವರಗಳನ್ನು ನೀಡಿದರು.

2015ರಿಂದ ಎನ್‌ಇಪಿ ಜಾರಿ ಸಂಬಂಧ ಚರ್ಚೆ ನಡೆಯುತ್ತಿತ್ತು. ಈಗ ಹೊಸ ನೀತಿ ಜಾರಿಯಾಗಿದೆ. 34 ವರ್ಷದ ಹಿಂದೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಿತ್ತು. ಆದಾದ ಬಳಿಕ ಈಗ ಬದಲಾವಣೆ ಆಗುತ್ತಿದೆ.

ಎನ್‌ಇಪಿಯಲ್ಲಿ ಏನಿದೆ..?

ಇನ್ನು ಮುಂದೆ 10+2 ಶಿಕ್ಷಣ ವ್ಯವಸ್ಥೆ ಇರುವುದಿಲ್ಲ. ಇದನ್ನು 5+3+3+4 ರಂತೆ ವಿಂಗಡನೆ ಮಾಡಲಾಗಿದೆ. ಇದರರ್ಥ ಶಾಲೆಯ ಮೊದಲ ಐದು ವರ್ಷಗಳು ಅಡಿಪಾಯ ಹಂತ, 3 ರಿಂದ 5 ನೇ ತರಗತಿಯವರೆಗಿನ ಮೂರು ವರ್ಷಗಳನ್ನು ಪೂರ್ವಸಿದ್ಧತಾ ಹಂತವಾಗಿ ವಿಂಗಡಿಸಲಾಗಿದೆ. ನಂತರ ಮೂರು ವರ್ಷಗಳು ಮಧ್ಯಮ ಹಂತವಾಗಿ ವಿಂಗಡಿಸಲಾಗಿದೆ. ನಂತರದ ನಾಲ್ಕು ವರ್ಷವನ್ನು ದ್ವಿತೀಯ ಹಂತವನ್ನಾಗಿ ವಿಂಗಡಿಸಲಾಗಿದೆ. ಶಾಲೆಗಳು ಶಾಲೆಗಳು ಕಲೆ, ವಾಣಿಜ್ಯ, ವಿಜ್ಞಾನದ ಹೊಳೆಗಳ ಯಾವುದೇ ಕಟ್ಟುನಿಟ್ಟಿನ ರಚನೆಯನ್ನು ಹೊಂದಿರುವುದಿಲ್ಲ, ವಿದ್ಯಾರ್ಥಿಗಳು ತಾವು ಬಯಸುವ ಯಾವುದೇ ಕೋರ್ಸ್‌ಗಳನ್ನು ತೆಗೆದುಕೊಳ್ಳಬಹುದು.

  • 5ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಬೇಕು
  • 6ನೇ ತರಗತಿಯಿಂದಲೇ ಕೋಡಿಂಗ್‌ ಪಾಠವನ್ನು ಹೇಳಿಕೊಡಬೇಕು.
  • ಸಂಶೋಧನೆ ಸಂಬಂಧ ಇನ್ನು ಮುಂದೆ ಯಾವುದೇ ಎಂಪಿಎಲ್‌ ಇರುವುದಿಲ್ಲ.
  • ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ
  • ಬೋರ್ಡ್ ಪರೀಕ್ಷೆಗಳ ಮಹತ್ವ ಕಡಿಮೆ ಮಾಡುವುದು, ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು
  • ಮಾರ್ಕ್ಸ್ ಕಾರ್ಡ್‌ಗಳು ಕೇವಲ ಅಂಕಗಳು ಮತ್ತು ಹೇಳಿಕೆಗಳಿಗೆ ಬದಲಾಗಿ ಕೌಶಲ್ಯ ಮತ್ತು ಸಾಮರ್ಥ್ಯಗಳ ಕುರಿತು ಸಮಗ್ರ ವರದಿ ನೀಡುವುದು
  • ಪ್ರತಿ ವಿದ್ಯಾರ್ಥಿ ಒಂದು ಕೌಶಲ್ಯವನ್ನು ಕಲಿಯಲೇಬೇಕು
  • ವಯಸ್ಕರಿಗೆ ಆ್ಯಪ್ ,ಆನ್ ಲೈನ್, ಟಿವಿ , ಆನ್ ಲೈನ್ ಬುಕ್ ಗಳ ಮೂಲಕ ಕಲಿಕೆಗೆ ಅವಕಾಶ
  • ಪ್ರಾದೇಶಿಕ ಭಾಷೆಗಳಲ್ಲಿ ಇ- ಕಂಟೆಂಟ್ ಪೂರೈಕೆ
  • ಮಧ್ಯದಲ್ಲಿ ಕೋರ್ಸ್ ಬಿಡಲು ಬಯಸುವರಿಗೆ ಪ್ರವೇಶ ಮತ್ತು ನಿರ್ಗಮನ ಆಯ್ಕೆ
  • ಉನ್ನತ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕರೂಪದ ಪರೀಕ್ಷೆ
  • ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಸರ್ಕಾರದಿಂದಲೇ ಶುಲ್ಕ ನಿಗದಿ
  • ಉನ್ನತ ಶಿಕ್ಷಣದ ನೀಡುವ ಕಾಲೇಜುಗಳಲ್ಲಿ ಸಾಹಿತ್ಯ, ಸಂಗೀತ, ತತ್ವಶಾಸ್ತ್ರ, ಕಲೆ, ನೃತ್ಯ, ರಂಗಭೂಮಿ, ಶಿಕ್ಷಣ, ಗಣಿತ, ಅಂಕಿಅಂಶ, ಶುದ್ಧ ಮತ್ತು ಅನ್ವಯಿಕ ವಿಜ್ಞಾನ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಕ್ರೀಡೆ, ಅನುವಾದ ಮತ್ತು ವ್ಯಾಖ್ಯಾನ ಇತ್ಯಾದಿ ವಿಭಾಗಗಳು ಇರಬೇಕು.
  • ಉನ್ನತ ಶಿಕ್ಷಣದಲ್ಲೂ ಮೂರು ರೀತಿಯ ಭಾಷೆ ಕಲಿಕೆಗೆ ಅವಕಾಶ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending