ದಿನದ ಸುದ್ದಿ

ದಾವಣಗೆರೆ | ಜ.18 ರಂದು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಜ.18 ರಂದು ಬೆಳಿಗ್ಗೆ 10 ಗಂಟೆಗೆ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಶಂಕುಸ್ಥಾಪನೆಯನ್ನು ನೆರೆವೇರಿಸುವರು.

ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡುವರು. ಕ.ರಾ.ರ.ಸಾ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಚಂದ್ರಪ್ಪ ನೂತನ ಮಾರ್ಗಗಳ ಉದ್ಘಾಟನೆಯನ್ನು ನೆರೆವೇರಿಸುವರು.

ಮುಖ್ಯ ಅತಿಥಿಗಳಾಗಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ.

ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ನವಲಗುಂದ ವಿಧಾನಾಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತದ ಅಧ್ಯಕ್ಷರಾದ ಶಂಕರ್ ಪಾಟೀಲ್ ಮುನೆನಕೊಪ್ಪ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಜಿ.ಪಂ ಅಧ್ಯಕ್ಷರಾದ ಕೆ.ವಿ ಶಾಂತಕುಮಾರಿ ಹಾಗೂ ವಿಧಾನಪರಿಷತ್ ಶಾಸಕರು, ಮಹಾನಗರಪಾಲಿಕೆಯ ಮಹಾಪೌರರು, ದಾ-ಹ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು, ಕ.ರಾ.ರ.ಸಾನಿಗಮದ ಉಪಾಧ್ಯಕ್ಷರು ಪಾಲ್ಗೊಳ್ಳುವರು.

ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್. ಉಮಾಶಂಕರ್, ಕ.ರಾ.ಸ.ಸಾ ನಿಗಮದ ನಿರ್ದೇಶಕ ಶಿವಯೋಗಿ ಸಿ ಕಳಸದ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್.

ಕರ್ನಾಟಕ ನಗರಮೂಲಸೌಕರ್ಯ ಅಭಿವೃದ್ದಿಯ ಮತ್ತು ಹಣಕಾಸು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ ರೇಜು, ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದಾವಣಗೆರೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version