ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮಧ್ಯಾಹ್ನದ ಪ್ರಮುಖ ಸುದ್ದಿಗಳು

    1. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರವಲಯದ ಪಾವಗಡ ರಸ್ತೆಯಲ್ಲಿ ಎ.ಹೆಚ್.ಪಿ ಯೊಜನೆಯಡಿ 48.2 ಎಕರೆಯಲ್ಲಿ ವಸತಿ ಸಮಯುಚ್ಚದ ನಿರ್ಮಾಣಕ್ಕೆ ವಸತಿ ಸಚಿವ ಸೊಮಣ್ಣ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ನಗರ ಪ್ರದೇಶದಲ್ಲಿ ನೀವಶನ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರತಿ ಮನೆ ಮೇಲೆ ಎರಡು ಅಂತಸ್ಸಿನ ಮನೆಯನ್ನು ನಿರ್ಮಾಣ ಮಾಡಲು ಯೊಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
    2. ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಹಲವಾರು ವರ್ಷಗಳಿಂದ ಬಗರ್ ಹುಕುಂ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಶಾಸಕ ಸಿ.ಟಿ ರವಿ ಇಂದು ತಮ್ಮ ಕಚೇರಿಯಲ್ಲಿ ಸಾಗುವಳಿ ಪತ್ರಗಳನ್ನು ವಿತರಣೆ ಮಾಡಿದರು. ಸುಮಾರು ೫೦ ಕ್ಕು ಹೆಚ್ಚು ಭೂ ಮಾಲೀಕರು ಈ ಸಂದರ್ಭದಲ್ಲಿ ಸಾಗುವಳಿ ಪತ್ರಗಳನ್ನು ಪಡೆದುಕೊಂಡರು.
    3. ಪುರಾಣದ ಪುಣ್ಯಕಥೆಗಳು, ಪವಾಡಗಳು, ಶಿವನ ಆರಾಧನೆಯನ್ನು ಬಾಲ್ಯದಿಂದಲೂ ಮೈಗೂಡಿಸಿಕೊಂಡು ಬೆಳೆದವರು ಮಲ್ಲಮ್ಮನವರು. ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ನವರು ವಚನಗಳನ್ನು ಬರೆಯಲಿಲ್ಲ ಅಥವಾ ಹೇಳಲಿಲ್ಲ ಮಲ್ಲಮ್ಮನವರ ಜೀವನವೇ ಒಂದು ಅಪೂರ್ವವಾದ ವಚನವಾಗಿದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಉದಯ ಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿಂದು ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    4. ಕಳೆದ 25ವರ್ಷಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಅಸ್ಸಾಂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುವಾಹತಿಯಲ್ಲಿಂದು ರಾಷ್ಟ್ರಪತಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅಸ್ಸಾಂ ಈ ಗೌರವವನ್ನು ಪಡೆದ ದೇಶದ 10ನೇ ರಾಜ್ಯವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಅಸ್ಸಾಂನಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು 1990ರಲ್ಲಿ ಜಾರಿಗೊಳಿಸಲಾಗಿತ್ತು. ಇದನ್ನು 7 ಬಾರಿ ವಿಸ್ತರಿಸಲಾಗಿತ್ತು. 8ವರ್ಷಗಳ ಪ್ರಧಾನಮಂತ್ರಿಯವರ ಆಡಳಿತದ ನಂತರ ರಾಜ್ಯದ 23 ಜಿಲ್ಲೆಗಳು ಕಾಯ್ದೆ ಮುಕ್ತವಾಗಿವೆ.
    5. ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದ ತೀವ್ರಗೊಂಡಿರುವ ’ಅಸಾನಿ’ ಚಂಡಮಾರುತ ಎರಡು ದಿನಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
    6. ಕೋವಿಡ್-19 ವಿರುದ್ಧದ ಹೋರಾಟದ ಭಾಗವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ193 ಕೋಟಿ 53ಲಕ್ಷ ಕೋವಿಡ್ ಲಸಿಕಾ ಡೋಸ್‌ಗಳನ್ನು ಒದಗಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ಕೋಟಿ 15ಲಕ್ಷ ಬಳಕೆಯಾಗದ ಲಸಿಕಾ ಡೋಸ್‌ಗಳು ಬಾಕಿ ಉಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
    7. ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ದಾನಿಶ್ ಸಿದ್ದಿಕಿ ಸೇರಿದಂತೆ ನಾಲ್ವರು ಭಾರತೀಯ ಛಾಯಾಗ್ರಾಹಕರು 2022ನೇ ಸಾಲಿನ ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದ್ನಾನ್ ಅಬಿದಿ, ಸನಾ ಇರ್ಷಾದ್ ಮಟ್ಟೂ ಹಾಗೂ ಅಮಿತ್ ದವೆ ಅವರು ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾದ ಇತರ ಭಾರತೀಯ ಛಾಯಾಗ್ರಾಹಕರು. ‘ಫೀಚರ್ ಫೋಟೊಗ್ರಫಿ’ ವಿಭಾಗದಲ್ಲಿ ಇವರಿಗೆ ಪ್ರಶಸ್ತಿ ಲಭಿಸಿದೆ.
    8. ದೆಹಲಿ ವಿಭಾಗದ ಉತ್ತರ ರೈಲ್ವೆಯು, ತಾಯಂದಿರು ತಮ್ಮ ಶಿಶುಗಳೊಂದಿಗೆ ಆರಾಮವಾಗಿ ಮಲಗಲು ಅನುಕೂಲವಾಗುವಂತೆ ಆಯ್ದ ರೈಲುಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ’ಬೇಬಿ ಬರ್ತ್’ ಅನ್ನು ಪರಿಚಯಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
    9. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತೀವ್ರಗೊಂಡಿರುವ ‘ಅಸಾನಿ’ ಚಂಡಮಾರುತ ಮುಂದಿನ ೪೮ ಗಂಟೆಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    10. ಜಕಾರ್ತದಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಹಿರಿಯ ಡ್ರ್ಯಾಗ್ ಫ್ಲಿಕ್ಕರ್ ರೂಪಿಂದರ್ ಪಾಲ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್ ಅರ್ಹತಾ ಟೂರ್ನಿಗಳ ಪೈಕಿ ಒಂದಾಗಿರುವ ಏಷ್ಯಾ ಕಪ್ ಟೂರ್ನಿ ಮೇ 23ರಿಂದ ಜೂನ್ 1ರವರೆಗೆ ನಡೆಯಲಿದೆ. ಹಲವು ದಿನಗಳ ನಂತರ ಕರ್ನಾಟಕದ ಹಿರಿಯ ಆಟಗಾರ ಎಸ್.ವಿ. ಸುನಿಲ್ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ.
    11. ಮುಂಬೈನಲ್ಲಿಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version