ದಿನದ ಸುದ್ದಿ
ಈಗಿನ ಪ್ರಮುಖ ಸುದ್ದಿಗಳು
- ಪ್ರಧಾನಮಂತ್ರಿಗಳ ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ದೇಶವನ್ನು ಮುನ್ನಡೆಸಲು ಎಲ್ಲ ಪ್ರಧಾನಮಂತ್ರಿಗಳು ಕೈಗೊಂಡಿರುವ ಕೊಡುಗೆಯನ್ನು ಪ್ರತಿಬಿಂಬಿಸುವ ಹಾಗೂ ಅವರಿಗೆ ಗೌರವ ಸಲ್ಲಿಸುವ ಸಂಗ್ರಹಾಲಯ ದೆಹಲಿಯ ತೀನ್‌ಮೂರ್ತಿ ಎಸ್ಟೇಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ದೇಶದ ಬೆಳವಣಿಗೆಗೆ ನೀಡುವ ಕೊಡುಗೆಗಳನ್ನು ಪ್ರತಿಬಿಂಬಿಸುವ ಹಾಗೂ ಅವರ ನಾಯಕತ್ವದಲ್ಲಿ ಯುವಜನರಿಗೆ ಸ್ಫೂರ್ತಿ ಹಾಗೂ ಯುವ ಪೀಳಿಗೆಗೆ ಮಾರ್ಗದರ್ಶನ ನೀಡುವ ಸಂಗ್ರಹಾಲಯ ಇದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತಕ್ಕೆ ಹಿಂತಿರುಗುವ ಮೊದಲು ಇಂದು ಅಮೆರಿಕದ ಇಂಡೋ ಫೆಸಿಫಿಕ್ ಕಮಾಂಡ್ ಕೇಂದ್ರ ಕಚೇರಿ ಹವೇಲಿಗೆ ಭೇಟಿ ನೀಡಿ, ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ. ಅಮೆರಿಕದ ಸೇನಾ ಫೆಸಿಫಿಕ್ ವಾಯುಪಡೆಯ ಸ್ಮಾರಕವು ಹವೇಲಿಯಲ್ಲಿ ಇದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ಕೇಂದ್ರ ಕಚೇರಿಗೆ ಆಗಮಿಸಿದ್ದರು.
- ಗ್ರಾಮೀಣ ಪ್ರದೇಶದಲ್ಲಿ ಜಲಶಕ್ತಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವಂತೆ ಸದಸ್ಯರಿಗೆ ಅವರು ಕರೆ ನೀಡಿದ್ದಾರೆ ಎಂದು ಟ್ವೀಟ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
- ಜಲಿಯನ್‌ವಾಲಬಾಗ್ ಹುತಾತ್ಮರ ದಿನ ಇಂದು. ಈ ಹತ್ಯಾಕಾಂಡದಲ್ಲಿ ವೀರ ಮರಣವನ್ನಪ್ಪಿದ ಸ್ವಾತಂತ್ಯ ಹೋರಾಟಗಾರರಿಗೆ ದೇಶ ಗೌರವ ನಮನ ಸಲ್ಲಿಸುತ್ತಿದೆ. ಹುತಾತ್ಮರದ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ವಾರ್ತಾ ಸಚಿವ ಅನುರಾಗ್‌ಸಿಂಗ್ ಠಾಕೂರ್ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
- ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಸಿಬ್ಬಂದಿ ಇಂದು ಹತ್ಯೆ ಮಾಡಿದೆ ಎಂದು ಕುಲ್ಗಾಮ್ ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
- ಪುಣೆಯಲ್ಲಿ ಇಂದು ರಾತ್ರಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಪರಾಜಯಗೊಂಡಿರುವ ಮುಂಬೈ ಇಂಡಿಯನ್ಸ್ ತಂಡ ತಲಾ ಎರಡು ಗೆಲುವು, ಸೋಲಿನ ಮಿಶ್ರ ಫಲ ಅನುಭವಿಸಿರುವ ಪಂಜಾಬ್ ತಂಡದ ವಿರುದ್ಧ ಪುಟಿದೇಳಲು ಎದುರು ನೋಡುತ್ತಿದೆ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243