ದಿನದ ಸುದ್ದಿ

ಲೋಕಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಪ್ರಕಟ

Published

on

ಸುದ್ದಿ ಮುಖ್ಯಾಂಶಗಳು

  1. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  2. ಬಸವಣ್ಣನವರ ಸಮಸಮಾಜದ ಕನಸನ್ನು ಸಾಕಾರಗೋಳಿಸುವ ನಿಟ್ಟಿನಲ್ಲಿ ಮುಂದಿನ ವರ್ಷ ’ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
  3. ಜನಸಂಖ್ಯೆ ನಿಯಂತ್ರಣ, ತಾಯಿ ಮಗುವಿನ ಮರಣ ಪ್ರಮಾಣ ತಗ್ಗಿಸಲು ಮೈಸೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರ್ಭನಿರೋಧಕ ಚುಚ್ಚುಮದ್ದು ನೀಡಲು ಚಿಂತನೆ ನಡೆಸಲಾಗಿದೆ. ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ ಗುಂಡುರಾವ್ ಚಾಲನೆ ನೀಡಿದರು.
  4. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಕೃತಕ ಬುದ್ಧಿಮತ್ತೆ ಮಿಷನ್‌ಗಾಗಿ 10 ಸಾವಿರದ 372 ಕೋಟಿ ಒದಗಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version