Connect with us

ದಿನದ ಸುದ್ದಿ

ಮದ್ಯಾಹ್ನದ ಸುದ್ದಿ ಮುಖ್ಯಾಂಶಗಳು

Published

on

ಮದ್ಯಾಹ್ನದ ಸುದ್ದಿ ಮುಖ್ಯಾಂಶಗಳು

  1. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಹೊಸ ಪಠ್ಯ ಕ್ರಮ ಅಳವಡಿಸುವುದಿಲ್ಲ. ಆದರೆ ಪಠ್ಯದಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಲ್ಲಿ ಉನ್ನತ ವ್ಯಕ್ತಿತ್ವ ರೂಪಿಸಲು ನೈತಿಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
  2. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು ಶಾಂತಿಗೆ ಭಂಗ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಬೆಳಗಾವಿಯಲ್ಲಿ ಹೇಳಿದ್ದಾರೆ.
  3. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ನಾಳೆ ಪ್ರಮುಖ ಸ್ಟಾರ್ಟ್ ಅಪ್ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
  4. ಆಜಾದಿ ಕಾ ಅಮೃತ ಮಹೋತ್ಸವ್ ಹಿನ್ನೆಲೆಯಲ್ಲಿ ಎರಡು ದಿನಗಳ ’ಅಮೃತ ಸಮಾಗಮ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ, ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತಿತರರು ಭಾಗವಹಿಸಲಿದ್ದಾರೆ.
  5. ಅಂತಾರಾಷ್ಟ್ರೀಯ ಮಾನವಸಹಿತ ಗಗನಯಾನ ದಿನವನ್ನು ಇಂದು ಆಚರಿಸಲಾಗುತ್ತಿದೆ. 1961ರ ಏಪ್ರಿಲ್12 ರಂದು ರಷ್ಯಾದ ಬಾಹ್ಯಾಕಾಶ ವಿಜ್ಞಾನಿ ಯೂರಿ ಗಗರಿನ್ ಅವರು ಗಗನಯಾನ ಕೈಗೊಂಡ ಸ್ಮರಣಾರ್ಥ ಪ್ರತಿ ವರ್ಷ ಈ ದಿನಾಂಕದಂದು ಗಗನಯಾನ ದಿನ ಆಚರಿಸಲಾಗುತ್ತಿದೆ.
  6. ಭುವನೇಶ್ವರದ ಕಳಿಂಗ ಹಾಕಿ ಕ್ರೀಡಾಂಗಣದಲ್ಲಿ ಇದೇ 14 ಗುರುವಾರದಿಂದ ಆರಂಭಗೊಳ್ಳಲಿರುವ ಪುರುಷರ ಹಾಕಿ ಪ್ರೊ ಲೀಗ್ ಪಂದ್ಯಾವಳಿಗೆ 22 ಪಟುಗಳನ್ನೊಳಗೊಂಡ ಭಾರತೀಯ ತಂಡವನ್ನು ಆಯ್ಕೆ ಮಾಡಲಾಗಿದೆ. ಅಮಿತ್ ರೋಹಿದಾಸ್ ನಾಯಕರಾಗಿದ್ದು, ಹರ್ಮನ್ ಪ್ರೀತ್ ಸಿಂಗ್ ಅವರನ್ನು ಉಪ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಪ್ರಥಮ ಪಂದ್ಯದಲ್ಲಿ ಭಾರತ ಜರ್ಮನಿ ವಿರುದ್ಧ ಸೆಣಸಲಿದೆ.
  7. ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿಂದು ರಾತ್ರಿ 7.30 ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಲಿವೆ.
  8. ರಾಜ್ಯದ ಕರಾವಳಿ ಭಾಗದಲ್ಲಿ ಬೀಚ್ ಟೂರಿಸಂ ಮತ್ತು ಟೆಂಪಲ್ ಟೂರಿಸಂ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ’ಕರಾವಳಿ ನಿಯಂತ್ರಣ ವಲಯ – ಸಿಆರ್‌ಝೆಡ್’ ನಿಯಮಕ್ಕೆ ತಿದ್ದುಪಡಿ ತರುವ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ನಿನ್ನೆ ತಿಳಿಸಿದ್ದಾರೆ.
  9. “ತ್ವರಿತವಾಗಿ ಡಿಜಿಟಲೀಕರಣಗೊಳ್ಳುತ್ತಿರುವ ಜಗತ್ತಿನಲ್ಲಿ, ಸೈಬರ್ ಭದ್ರತೆ, ಹೈಬ್ರಿಡ್ ಕ್ಲೌಡ್ ಮತ್ತು ಕೃತಕ ಬುದ್ದಿಮತ್ತೆಯಂತಹ ತಂತ್ರಜ್ಞಾನಗಳಲ್ಲಿ ಭಾರತಕ್ಕೆ ಅಗಾಧವಾದ ಅವಕಾಶವಿದೆ” ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
  10. ಉಕ್ರೇನ್‌ನಲ್ಲಿ ಸಂಘರ್ಷ ನಡೆಯುತ್ತಿರುವ ಸಂದರ್ಭದಲ್ಲಿ ಭಾರತ-ಅಮೆರಿಕ ನಡುವಿನ ಮಾತುಕತೆ ಮಹತ್ವದ್ದಾಗಿದ್ದು, ಉಕ್ರೇನ್‌ನ ನಾಗರಿಕರ ಸುರಕ್ಷತೆ ಹಾಗೂ ಅವರಿಗೆ ಔಷಧ ಸೇರಿದಂತೆ ಎಲ್ಲ ಮಾನವೀಯ ನೆರವಿನ ತಡೆರಹಿತ ಪೂರೈಕೆಗೆ ಭಾರತ ಹೆಚ್ಚಿನ ಒತ್ತು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
  11. ಪ್ರಧಾನಿ ನರೇಂದ್ರ ಮೋದಿ ಅವರು, ಗುಜರಾತ್‌ನ ಅಡಾಲಜ್‌ನಲ್ಲಿರುವ ಅನ್ನಪೂರ್ಣಧಾಮದ ಹಾಸ್ಟೆಲ್ ಮತ್ತು ಶೈಕ್ಷಣಿಕ ಸಂಕೀರ್ಣವನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ ಜನಸಹಾಯಕ ಟ್ರಸ್ಟ್‌ನ ಹೀರಾಮಣಿ ಆರೋಗ್ಯಧಾಮಕ್ಕೂ ಪ್ರಧಾನಮಂತ್ರಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
  12. ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಅವರು ನಾಳೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಖನಿಜಾನ್ವೇಷಣಾ ಟ್ರಸ್ಟ್-ಎನ್‌ಎಂಇಟಿ ೪ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‌ದೀಪ್ ಸಿಂಗ್ ಪುರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ಗಣಿ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಮತ್ತಿತರರು ಭಾಗವಹಿಸಲಿದ್ದಾರೆ.
  13. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬಠುವಾ ಗ್ರಾಮದಲ್ಲಿ ನಿನ್ನೆ ರಾತ್ರಿ ರೈಲಿಗೆ ಸಿಲುಕಿ ಐವರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending