ದಿನದ ಸುದ್ದಿ
ಈಗಿನ ಪ್ರಮುಖ ಸುದ್ದಿ ಮುಖ್ಯಾಂಶಗಳು
ಈಗಿನ ಪ್ರಮುಖ ಸುದ್ದಿ ಮುಖ್ಯಾಂಶಗಳು
- ಬೆಂಗಳೂರಿನಲ್ಲಿಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ನೃಪತುಂಗ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವತ್ಥ ನಾರಾಯಣ, ಆರಗ ಜ್ಞಾನೇಂದ್ರ ಮತ್ತಿತರರು ಉಪಸ್ಥಿತರಿದ್ದರು.
- ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಎರಡು ದಿನಗಳ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮಿಸಿದರು. ಅವರನ್ನು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ಕೆ. ನಾರಾಯಣ ಗೌಡ ಮತ್ತಿತರರು ಸ್ವಾಗತಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಚಿವರು ಭಾಗಿಯಾಗಲಿದ್ದಾರೆ. ನಂತರ ಚಿತ್ರರಂಗದ ಪ್ರಮುಖರೊಂದಿಗೆ ಕೇಂದ್ರ ಸಚಿವರು ಸಭೆ ನಡೆಸಲಿದ್ದಾರೆ.
- ಕರ್ನಾಟಕ, ಕೇರಳ ಸೇರಿದಂತೆ ದೇಶದ ಹಲವೆಡೆ ಇಂದು ಮುಸ್ಲಿಂ ಬಾಂಧವರು ಈದ್ ಉಲ್ ಫಿತರ್ ಆಚರಿಸುತ್ತಿದ್ದಾರೆ. ಇಂದು ರಂಜಾನ್ ಉಪವಾಸ ಮಾಸದ ಕೊನೆಯ ದಿನವಾಗಿದೆ. ಮೊನ್ನೆ ಚಂದ್ರದರ್ಶನವಾಗಿಲ್ಲ, ಹೀಗಾಗಿ ಇಂದು ಈದ್ ಉಲ್ ಫಿತರ್ ಆಚರಿಸಲಾಗುತ್ತದೆ. ಕೊಲ್ಲಿ ರಾಷ್ಟ್ರಗಳಲ್ಲಿ ನಿನ್ನೆ ಈದ್ ಆಚರಿಸಲಾಯಿತು.
- ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಸಂದೇಶದಲ್ಲಿ, ಮುಸ್ಲಿಂ ಬಾಂಧವರು ಒಂದು ತಿಂಗಳ ಕಾಲ ಉಪವಾಸ ಕೈಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಡವರಿಗೆ ಆಹಾರ ಮತ್ತು ಆಹಾರಧಾನ್ಯಗಳನ್ನು ವಿತರಿಸಲು ಅವರು ವಿಶೇಷ ಆದ್ಯತೆ ನೀಡಿದ್ದಾರೆ. ಈ ಹಬ್ಬ ಸೌಹಾರ್ದತೆ, ಶಾಂತಿ ಮತ್ತು ಸಮಾಜದಲ್ಲಿ ಸಮೃದ್ಧತೆ ನಿರ್ಮಿಸಲು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ಹಾರೈಸಿದ್ದಾರೆ.
- ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಈ ಹಬ್ಬ ಸ್ನೇಹ, ಭ್ರಾತೃತ್ವ, ಪ್ರೀತಿ ಮತ್ತು ಪರಸ್ಪರ ಗೌರವವನ್ನು ಪಸರಿಸುವಂತಾಗಲಿ. ಹಬ್ಬ ಶ್ರೀಮಂತ ಪರಂಪರೆಯಾದ ಶಾಂತಿ, ಸೌಹಾರ್ದತೆ ಮತ್ತು ಸಂತಸ ತರಲಿ ಎಂದು ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಸಮಾಜದಲ್ಲಿ ಭ್ರಾತೃತ್ವ ಮತ್ತು ಒಟ್ಟಿಗೆ ಬಾಳುವ ಸ್ಫೂರ್ತಿಯನ್ನು ಹೆಚ್ಚಿಸಲಿ, ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧ ವಾತಾವರಣವನ್ನು ನಿರ್ಮಿಸಲಿ ಎಂದು ಹೇಳಿದ್ದಾರೆ.
- ಮುಂಬೈನಲ್ಲಿ ನಿನ್ನೆ ನಡೆದ ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಜಸ್ತಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಇಂದು ನವಿಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡ ಪರಸ್ಪರ ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243