Connect with us

ದಿನದ ಸುದ್ದಿ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮಧ್ಯಾಹ್ನದ ಪ್ರಮುಖ ಸುದ್ದಿಗಳು

  1. ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಚಾವಣಿ ಕುಸಿತಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಕ್ರೀಡಾಂಗಣದ ರಚನೆಯಲ್ಲಿ ದೋಷವಿದೆಯೇ ಅಥವಾ ಬೇರೆ ಕಾರಣದಿಂದ ಕುಸಿತವಾಗಿಯೇ ಎಂಬುದನ್ನು ನಾವು ಇನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
  2. ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
  3. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಬೆಂಗಳೂರಿನ ದೂರದರ್ಶನ ಕೇಂದ್ರದ ಆವರಣದಲ್ಲಿ ಇಂದು ದೂರದರ್ಶನ ಹಾಗೂ ಆಕಾಶವಾಣಿಯ ಸಿಬ್ಬಂದಿ ವರ್ಗಕ್ಕೆ ವಿಶೇಷ ಯೋಗ ಶಿಬಿರ ಆಯೋಜಿಸಲಾಗಿತ್ತು. ಯೋಗ ಗುರು ರಾಜೇಶ್ ಆಚಾರ್ಯ ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಚಿತ್ರನಟರಾದ ರಾಧಿಕಾ ನಾರಾಯಣ, ಸೂರಜ್ ಗೌಡ ಪಾಲ್ಗೊಂಡಿದ್ದರು.
  4. ತುರ್ತು ಕಾಮಗಾರಿ ಹಾಗೂ ಪಂಪ್‌ಹೌಸ್‌ನಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ನಾಳೆ ನೀರಿನ ಪೂರೈಕೆಯ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  5. ಪ್ರಸ್ತುತ ಕೈಗೊಂಡಿರುವ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನದ ಜೊತೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಸಾವಿರದ 500ಕ್ಕೂ ಹೆಚ್ಚು ವಿನೂತನ ವಿನ್ಯಾಸದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ತಯಾರಿ ನಡೆಸಲಾಗಿದೆ. ಅತಿ ಶೀರ್ಘದಲ್ಲೇ ಈ ಕಾರ್ಯಾಚರಣೆ ಕೈಗೊತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  6. ಇತಿಹಾಸ ಪ್ರಸಿದ್ದ ಚಾಮರಾಜನಗರದ ಚಾಮರಾಜೇಶ್ವರ ನೂತನ ರಥ ಇಂದು ಚಾಮರಾಜನಗರಕ್ಕೆ ಬರಲಿದೆ. ಸುಮಾರು 1ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ರಥವನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಿರ್ಮಾಣ ಮಾಡಲಾಗಿದೆ. ಇಂದು ಚಾಮರಾಜನಗರದ ಆದಿಶಕ್ತಿ ದೇವಸ್ಥಾನದ ಬಳಿ ವಿವಿಧ ಕಲಾತಂಡಗಳೊಡನೆ ರಥ ಮೆರವಣಿಗೆ ಮೂಲಕ ಹೊರಡಲಿದೆ.
  7. ದೇಶದಲ್ಲಿ ಇದುವರೆಗೆ ಸುಮಾರು 190 ಕೋಟಿ 97 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12ಲಕ್ಷದ 15ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
  8. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಚರಣೆ ಈಗಿನಿಂದಲೇ ಆರಂಭವಾಗಿದೆ. ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
  9. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತುಸು ಕಡಿಮೆಯಾಗಿದೆ. ಒಂದೇ ದಿನದಲ್ಲಿ 3 ಸಾವಿರದ 841ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಮೂರು ಸಾವಿರದ 295ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
  10. ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
  11. ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಮೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಡ್ರೋಣ್ ಮೂಲಕ ಸರ್ವೇ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ತಿಗಳ ನಕ್ಷೆಯನ್ನು ಗುರುತಿಸಿ, ಸಂರಕ್ಷಿಸಲು ಸರ್ಕಾರ 2.5 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ. ಮೊಹಮ್ಮದ್ ಶಾಫಿ ತಿಳಿಸಿದ್ದಾರೆ.
  12. ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕಿದೆ. ನಿವೃತ್ತಿಯ ಅಂಚಿನಲ್ಲಿದ್ದಾಗ ಕೆಲಸದ ಬಗ್ಗೆ ಹೆಮ್ಮೆ ಮೂಡುವಂತೆ ಇರಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದ್ದಾರೆ.
  13. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರಿದೆ. ಕೊರೊನಾ ನಾಲ್ಕನೇ ಅಲೆಯ ಆತಂಕ ಕೊಂಚ ನಿವಾರಣೆಯಾಗುತ್ತಿರುವ ಬೆನ್ನಲ್ಲೇ ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ಹೆಚ್ಚುಗೊಳಿಸಲಾಗಿದೆ. ದೇಶದಲ್ಲಿ ಇದುವರೆಗೆ ಸುಮಾರು 190ಕೋಟಿ 97ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12 ಲಕ್ಷದ 15 ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending