ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಅತ್ಯಾಧುನಿಕ ಲೇಜರ್ ಡಿಇಡಿ ಆಧಾರಿತ ಐಬ್ರಿಡ್ ಮತ್ತು ರೋಬೋಟಿಕ್ ಮೆಟಲ್ ತ್ರಿಡಿ ಪ್ರಿಂಟಿಂಗ್ ತಂತ್ರಜ್ಞಾನ ಒಳಗೊಂಡ ಪ್ರಪ್ರಥಮ ಪ್ರೋಟಾನ್ 1000ಎಚ್ ಮತ್ತು 1000ಆರ್ ಸಾಧನೆಗಳನ್ನು ಐಟಿ-ಬಿಟಿ ಖಾತೆ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ನಿನ್ನೆ ಬಿಡುಗಡೆ ಮಾಡಿದರು.
ದೇವನಹಳ್ಳಿ ವಿಮಾನನಿಲ್ದಾಣದ ಪಕ್ಕದಲ್ಲಿ 5 ಎಕರೆ ವಿಸ್ತೀರ್ಣದಲ್ಲಿ ಅತ್ಯಾಧುನಿಕ ಏರೋಸ್ಫೇಸ್ ಪಾರ್ಕ್ ಶೀರ್ಘ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು. - ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ಇರುವ ಸ್ವಿಸ್‌ಸಿಟಿಯಲ್ಲಿ ಪ್ರದೇಶ್ ಕಾಂಗ್ರೆಸ್ ಸಮಿತಿಯ ಎರಡು ದಿನಗಳ ನವಸಂಕಲ್ಪ ಶಿಬಿರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಉದ್ಘಾಟಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.
- ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಇದೇ ತಿಂಗಳ 8 ರೊಳಗೆ ಸಲ್ಲಿಸುವಂತೆ ಆಯೋಗ ತಿಳಿಸಿದೆ. ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಮೂರು ತಿಂಗಳೊಳಗೆ ವಿಚಾರಣಾ ವರದಿಯನ್ನು ಸಲ್ಲಿಸಲು ಆಯೋಗಕ್ಕೆ ಸೂಚಿಸಿದೆ. ಸಾರ್ವಜನಿಕರು, ವಿಶೇಷವಾಗಿ ಜನಪ್ರತಿನಿಧಿಗಳು, ಕಾರ್ಯದರ್ಶಿಗಳು, ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗ, ಕೊಠಡಿ ಸಂಖ್ಯೆ, 133 ಮತ್ತು 134ಮೊದಲನೇ ಮಹಡಿ, ವಿಕಾಸಸೌಧ ಇಲ್ಲಿ ತಮ್ಮ ಅಹವಾಲು ಅಥವಾ ಸಲಹೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.
- ಸಹಕಾರಿ ಸಂಸ್ಥೆಗಳಿಂದ ಖರೀದಿಗೆ ಅವಕಾಶ ನೀಡುವುದರ ಮೂಲಕ ಸರ್ಕಾರಿ-ಇ-ಮಾರುಕಟ್ಟೆ ವೇದಿಕೆ ಜೆಮ್‌ನ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸಂಪುಟ ನಿರ್ಧರಿಸಿತು ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಜೆಮ್ ಪೋರ್ಟಲ್ ಆರಂಭದ ನಂತರ ಸ್ವಸಹಾಯ ಗುಂಪುಗಳು ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ವಿವಿಧ ಸಾರ್ವಜನಿಕ ಉದ್ಯಮಿಗಳು, ಜೆಮ್ ಪೋರ್ಟಲ್‌ನಿಂದ ಖರೀದಿ ಮಾಡಬಹುದು ಎಂದು ಅವರು ತಿಳಿಸಿದರು.
- ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಾಳೆ ಕೇಂದ್ರ ಕ್ರೀಡಾ ಸಚಿವಾಲಯ ವಿಶ್ವ ಬೈಸಿಕಲ್ ದಿನ ಆಚರಿಸಲಿದೆ. ದೆಹಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ 750 ಬೈಸಿಕಲ್ ಸವಾರರು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ರಾಜ್ಯದ ಮಂಗಳೂರು, ಉಡುಪಿ, ಹಂಪಿ , ಬೇಲೂರು-ಹಳೇಬೀಡು, ವಿಜಯಪುರ, ಮಡಿಕೇರಿ, ಮೈಸೂರು ಸೇರಿದಂತೆ ದೇಶದ ೭೫ ಬೈಸಿಕಲ್ ಸವಾರರು ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರು ನೀಡುವ ವರದಿಯನ್ನಾಧರಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
- ರಾಜ್ಯದ ಎಲ್ಲಾ ಪಾಲಿಟೆಕ್ನಿಕ್‌ಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಾಲ್ಕೈದು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
- ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ಇರುವ ಸ್ವಿಸ್‌ಸಿಟಿಯಲ್ಲಿ ಪ್ರದೇಶ್ ಕಾಂಗ್ರೆಸ್ ಸಮಿತಿಯ ಎರಡು ದಿನಗಳ ನವಸಂಕಲ್ಪ ಶಿಬಿರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಉದ್ಘಾಟಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243