ದಿನದ ಸುದ್ದಿ
ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ
ಸುದ್ದಿದಿನಡೆಸ್ಕ್:ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.
ಬಳಿಕ ನಿಖಿಲ್‌ಗೆ ಹೂಗುಚ್ಛ ನೀಡಿ ಶುಭಕೋರಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್‌ಗೆ ಯಡಿಯೂರಪ್ಪ ಹಾಕಿ, ಹೂವಿನ ಹಾರ ಹಾಕಿ ಅಭಿನಂದಿಸಿದರು. ಜೊತೆಗೆ ಎಲ್ಲಾ ನಾಯಕರು ವಿಕ್ಟರಿ ಸಿಂಬಲ್ ತೋರಿಸಿ ಪರಸ್ಪರ ಕೈ ಕುಲುಕಿದರು.
ಈ ವೇಳೆ ಮಾತನಾಡಿದ ಬಿಎಸ್‌ವೈ, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಅಂತಾ ಘೋಷಣೆ ಮಾಡಿದ್ದೇವೆ. ಮೋದಿ ಆಶೀರ್ವಾದ ಇದೆ. ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ತಾರೆ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ, ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243