ದಿನದ ಸುದ್ದಿ
ಯಾವುದೇ ಗೊಂದಲ ಬೇಡ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ : ಸಿಎಂ ಬಿ.ಎಸ್ ಯಡಿಯೂರಪ್ಪ
ಸುದ್ದಿದಿನ, ಬೆಂಗಳೂರು: ಯಾವುದೇ ಗೊಂದಲ ಬೇಡ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಸರಕಾರವು 10 ನೇ ತರಗತಿ ಪರೀಕ್ಷೆ ನಡೆಸುವ ವಿಷಯದ ವಿರುದ್ಧ ಪೋಷಕರು ಸುಪ್ರೀಂ ಕೋರ್ಟ್ ಕದ ತಟ್ಟಿದಾಗ, ಕೋರ್ಟ್ ಛೀಮಾರಿ ಹಾಕಿತ್ತು. ಇನ್ನು ಕರ್ನಾಟಕದಲ್ಲಿಯೂ ಕೊರೊನಾ ಸೋಂಕಿನ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಬೇಡ ಎಂಬುದು ಬಹುತೇಕ ಪೋಷಕರ ಅಭಿಪ್ರಾಯವಾಗಿದೆ.
ಆದರೂ ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷಾ ದಿನಾಂಕ ಘೋಷಿಸಿದ್ದರು. ಅದರಿಂದ ಸಚಿವ ಸುರೇಶ್ ಕುಮಾರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಕೂಗು ಎದ್ದಿದೆ.
ಇದನ್ನೂ ಓದಿ | ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸುರೇಶ್‌ಕುಮಾರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿಲ್ಲ. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಚಿವ ಸುರೇಶ್ ಕುಮಾರ್ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಚರ್ಚೆ ಮಾಡಿಯೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
— CM of Karnataka (@CMofKarnataka) June 29, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243