ರಾಜಕೀಯ
ಆರ್.ಎಸ್.ಎಸ್ ಭಯೋತ್ಪಾದಕರಿಗಿಂತ ಕಡಿಮೆ ಇಲ್ಲ: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ !
ಸುದ್ದಿದಿನ ಡೆಸ್ಕ್: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಜನರು ಭಯೋತ್ಪಾದಕರಿಗಿಂತ ಕಡಿಮೆ ಏನಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
ಬೆಂಗಳೂರಿನ ತಮ್ಮ ಪಕ್ಷದ ಕಚೇರಿಯಲ್ಲಿ ಆಯೋಚಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಹಂತಕರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದ್ದು, ದಾಭೋಲ್ಕರ್ ಮತ್ತು ಪಾನ್ಸರೆ ಹತ್ಯೆ ಕುರಿತು ಬಿಜೆಪಿ ವಹಿಸಿರುವ ಮೌನವನ್ನು ಅವರು ಪ್ರಶ್ನಿಸಿದ್ದಾರೆ.