ದಿನದ ಸುದ್ದಿ
ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ : ಸಚಿವ ಪ್ರಲ್ಹಾದ್ ಜೋಷಿ ಸ್ಪಷ್ಟನೆ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ 32.50 ದಶಲಕ್ಷ ಟನ್‌ನಷ್ಟು ಕಲ್ಲಿದ್ದಲು ಲಭ್ಯವಿದ್ದು, ಕೋಲ್ ಇಂಡಿಯಾ ಲಿಮಿಟೆಡ್, ಸಿಂಗರೇಣಿ ಕೊಲೇರಿಸ್ ಕಂಪನಿ ಲಿಮಿಟೆಡ್ ಮತ್ತು ಕೋಲ್ ವಾಷರೀಸ್ ಕಂಪನಿಗಳ ವಿವಿಧ ಕಡೆಗಳಲ್ಲಿ ಸಂಗ್ರಹಣೆಯಾಗಿದೆ. ಹಾಗಾಗಿ ಸಾಕಷ್ಟು ಪ್ರಮಾಣದಲ್ಲಿ ಕಲ್ಲಿದ್ದಲು ಲಭ್ಯವಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ 22 ದಶಲಕ್ಷ ಟನ್‌ಗಳಿಗೂ ಅಧಿಕ ಪ್ರಮಾಣದಲ್ಲಿ ಕಲ್ಲಿದ್ದಲು ಲಭ್ಯವಿದೆ. 2020-21ರಲ್ಲಿ 716ಟನ್ ಕಲ್ಲಿದ್ದಲು ಉತ್ಪಾದನೆಯಾಗಿದ್ದರೆ 2021-22ನೇ ಸಾಲಿನಲ್ಲಿ 777ದಶಲಕ್ಷ ಟನ್‌ನಷ್ಟು ಕಲ್ಲಿದ್ದಲು ಉತ್ಪಾದನೆಯಾಗಿದ್ದು, ಇದಕ್ಕೆ ಹೋಲಿಸಿದರೆ ಉತ್ಪಾದನೆಯಲ್ಲಿ ಶೇಕಡ 8.5ರಷ್ಟು ಹೆಚ್ಚಳವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243