Connect with us

ದಿನದ ಸುದ್ದಿ

ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ ; ಜಮ್ಮು-ಕಾಶ್ಮೀರದ ಜನತೆ ಹಾಗೂ ಅಭಿವೃದ್ಧಿ ವಿಚಾರಗಳಿಗೆ ಮಾತ್ರ ಸರ್ಕಾರ ಬದ್ಧ : ಅಮಿತ್ ಶಾ

Published

on

ಸುದ್ದಿದಿನ ಡೆಸ್ಕ್ : ಪಾಕಿಸ್ತಾನದ ( Pakistan ) ಜೊತೆಗೆ ಸರಕಾರದ ಯಾವುದೇ ಮಾತುಕತೆ ಇಲ್ಲ. ಜಮ್ಮು ಮತ್ತು ಕಾಶ್ಮೀರದ ( Jammu and Kashmir ) ಜನತೆಯೊಂದಿಗೆ ಮಾತ್ರ ಮೋದಿ ಸರಕಾರ ಮಾತನಾಡಲಿದ್ದು, ಯಾವುದೇ ಬೆಲೆ ತೆತ್ತಾದರೂ ಕಾಶ್ಮೀರ ಕಣಿವೆಯಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ನಿನ್ನೆ ಬೃಹತ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಆಡಳಿತದ ವೈಖರಿಯನ್ನು ಟೀಕಿಸಿದರು. ಕಳೆದ 75ವರ್ಷಗಳಲ್ಲಿ ಮೂರು ಕುಟುಂಬಗಳು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಹಾಳು ಮಾಡಿವೆ.

ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಹೆಸರಿಸಿದ ಅಮಿತ್ ಶಾ, ಜನರ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಅವರೇ ಕಾರಣ ಎಂದು ಹೇಳಿ, ಮೋದಿ ಸರ್ಕಾರ ಮಾತ್ರ ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿ ಹಾಗೂ ಕೈಗಾರಿಕಾ ಕ್ರಾಂತಿಯನ್ನು ತಂದಿದೆ ಎಂದು ತಿಳಿಸಿದರು.

ಆ ಮೂರು ಪಕ್ಷಗಳು ಕಳೆದ 75 ವರ್ಷಗಳಲ್ಲಿ ರಾಜ್ಯಕ್ಕೆ ಕೇವಲ 15ಸಾವಿರ ಕೋಟಿ ರೂಪಾಯಿ ತಂದಿದ್ದು, ಇದೀಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕೆ 56 ಸಾವಿರ ಕೋಟಿ ರೂಪಾಯಿ ಬಂಡವಾಳ ತಂದಿದೆ ಎಂದು ಅಮಿತ್ ಶಾ ಹೇಳಿದರು.

ಭಯೋತ್ಪಾದನೆ ಮತ್ತು ಉಗ್ರಗಾಮಿ ಘಟನೆಗಳಲ್ಲಿ ಇದುವರೆಗೆ ಜಮ್ಮು-ಕಾಶ್ಮೀರದಲ್ಲಿ 42 ಸಾವಿರ ಜನರು ಮೃತಪಟ್ಟಿದ್ದಾರೆ. ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಜನರ ಕೈಗೆ ಕಲ್ಲುಗಳು ಮತ್ತು ಬಂದೂಕುಗಳು ನೀಡಿ ದಾರಿ ತಪ್ಪಿಸಿದವು. ಆದರೆ ಪ್ರಸಕ್ತ ಸರ್ಕಾರ ಇಲ್ಲಿನ ಯುವಜನರ ಕೈಗಳಿಗೆ ಲ್ಯಾಪ್‌ಟ್ಯಾಪ್ ಮತ್ತು ಫೋನ್‌ಗಳನ್ನು ನೀಡಿದೆ ಎಂದು ಅವರು ಹೇಳಿದರು.

ಕಾಶ್ಮೀರವನ್ನು ಪ್ರವಾಸಿಗರ ಆಕರ್ಷಕ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಬಾರಿ ಅಕ್ಟೋಬರ್‌ವರೆಗೆ 22 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ. ಗುಲ್‌ಮಾರ್ಗ್ ಪ್ರದೇಶವೊಂದಕ್ಕೆ 13 ಲಕ್ಷ ಯಾತ್ರಿಕರು ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಿದ್ಯುತ್, ರಸ್ತೆ ಸೇರಿದಂತೆ ಯಾವುದೇ ನಾಗರಿಕ ಸೌಲಭ್ಯಗಳು ಇಲ್ಲ. ಆದರೆ, ಇಂದು ಜಮ್ಮು-ಕಾಶ್ಮೀರದ ಪ್ರತಿ ಗ್ರಾಮದಲ್ಲಿ ಎಲ್ಲ ಸೌಲಭ್ಯ ಒದಗಿಸಲಾಗಿದ್ದು, 56 ಸಾವಿರ ಕೋಟಿ ರೂಪಾಯಿ ಕೈಗಾರಿಕಾ ಪ್ಯಾಕೇಜ್‌ನಿಂದ ಸುಮಾರು 15 ಸಾವಿರ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending