ದಿನದ ಸುದ್ದಿ

ಕರ್ನಾಟಕದಲ್ಲಿ ಯಾವುದೇ ಪರೀಕ್ಷಾ ಅಕ್ರಮಕ್ಕೆ ಆಸ್ಪದವಿಲ್ಲ; ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ಸಿಐಡಿ ತನಿಖೆ : ಗೃಹ ಸಚಿವ ಆರಗ ಜ್ಞಾನೇಂದ್ರ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯಬಾರದು. ಈ ನಿಟ್ಟಿನಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು ಸಿಐಡಿ ನಡೆಸುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಕಲಬುರಗಿ ಜಿಲ್ಲೆಯಲ್ಲಿ ನಿನ್ನೆ ಸ್ಪಷ್ಟಪಡಿಸಿದ್ದಾರೆ.

ಕೆಎಸ್‌ಆರ್‌ಪಿ 6ನೇ ಪಡೆಯ ಹೆಚ್ಚುವರಿ ತರಬೇತಿ ಶಾಲೆಯ ಮೈದಾನದಲ್ಲಿ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ 4ನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳಿಂದ ಶಸ್ತ್ರವಂದನೆ ಸ್ವೀಕರಿಸಿ ಕವಾಯಿತು ಪರಿವೀಕ್ಷಣೆ ಮಾಡಿ, ಸಚಿವರು ಮಾತನಾಡಿದರು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಾರೇ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದರೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಸಿಐಡಿಗೆ ಸಂಪೂರ್ಣ ಸ್ವತಂತ್ರ ಅಧಿಕಾರ ನೀಡಲಾಗಿದೆ. ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ಹಗರಣದಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆ ಕೊಡಿಸುವ ಮೂಲಕ ಯಾರೂ ಇಂತಹ ಅವ್ಯವಹಾರ ಮಾರ್ಗದಲ್ಲಿ ನಡೆಯಬಾರದು ಎಂಬ ಸಂದೇಶ ನೀಡಲಾಗುವುದು ಎಂದು ಕರ್ನಾಟಕದ ಗೃಹ ಸಚಿವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version