ದಿನದ ಸುದ್ದಿ

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್

ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version