Connect with us

ಭಾವ ಭೈರಾಗಿ

ಯುದ್ಧ ಬೇಕಾ ಯುದ್ದ ?

Published

on

Photo courtesy : cartoon movement

ಈಗ ಎಲ್ಲೆಲ್ಲೂ ಯುದ್ಧದ ಕುರಿತೇ ಮಾತು. ನಮ್ಮ ಸಾಮಾಜಿಕ ಜಾಲತಾಣಗಳಂತೂ ಈಗ ಶುದ್ಧ ಕಸದ ತೊಟ್ಟಿಗಳಾಗಿವೆ. ಫೇಸ್‍ಬುಕ್ಕು ವಾಟ್ಸಾಪ್‍ಗಳು ನಮಗೆ ಬೇಕಿರುವುದು, ಬೇಡದಿರುವುದು, ನಮ್ಮ ಕೋಪ, ಅಸಹನೆ, ತಂತ್ರ, ಕುತಂತ್ರಗಳನ್ನು ಭಿತ್ತುವ ಮಹಾ ವೇಧಿಕೆಗಳಾಗಿವೆ. ಇನ್ನೂ ದುರಂತವೆಂದರೆ ಯುದ್ಧವನ್ನು ಬಯಸುತ್ತೇವೋ ಇಲ್ಲವೊ ಎಂಬುದು ನಮ್ಮ ದೇಶ ಭಕ್ತಿಯನ್ನಳೆಯುವ ಅಳತೆಗೋಲಾಗಿಬಿಟ್ಟಿದೆ. ಯುದ್ಧ ಬೇಕು ಪಾಕಿಸ್ತಾನದ ರಕ್ತ ಕುಡಿಯಬೇಕು ಎನ್ನುವವರನ್ನು ದೇಶಭಕ್ತರೆಂದೂ, ಯುದ್ಧ ಬೇಡ ಎಂದವರನ್ನು ದೇಶ ದ್ರೋಹಿಗಳೆಂದೂ ಪರಿಗಣಿಸುವ ಅಪಾಯಕಾರಿ ಬೆಳವಣಿಗೆಗಳಾಗುತ್ತಿವೆ, ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವ ಮಾತನಾಡಿದವರನ್ನು ಪಾಕಿಸ್ತಾನಕ್ಕೆ ಕಳಿಸಬೇಕೆಂದೂ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ.

ಹಿಂದುಸ್ಥಾನ್ ಜಿಂದಾಬಾದ್ ಎನ್ನುವುದಕ್ಕಿಂತಲೂ ಮುರ್ದಾಬಾದ್ ಎನ್ನುವುದೇ ನಮ್ಮ ದೇಶಭಕ್ತಿಯ ಸರ್ಟಿಫಿಕೇಟ್ ಆದಂತಿದೆ. ಖಂಡಿತವಾಗಿಯೂ ಇದೊಂದು ಸಮೂಹ ಸನ್ನಿಯಲ್ಲದೇ ಮತ್ತೇನು? ದೇಶಭಕ್ತಿ, ದೇಶಾಭಿಮಾನ ಎಂಬ ಪ್ಲೇ ಕಾರ್ಡ್ ಹಿಡಿದವರಿಗಂತೂ ತಾವು ಹೇಳಿದ್ದೇ ಸತ್ಯ ಎಂಬ ಅದಾವುದೋ ಭಾವ ನೆತ್ತಿಗೇರಿದೆ. ಅವರಿಗೆ ಸಂಯಮ ತಂದುಕೊಳ್ಳುವಂತೆ ಹೇಳಹೊರಟರೆ ಅಂಥವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಮೊದಲೇಹೇಳಿಬಿಡುತ್ತೇನೆ ನಾನಿದನ್ನು ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಗಳನ್ನಾಗಲೀ ಅಥವಾ ಎಡ,ಬಲ ಪಂಥಗಳನ್ನಾಗಲೀ ಮನಸಿನಲ್ಲಿಟ್ಟುಕೊಂಡು ಬರೆದಿಲ್ಲ. ಕೇವಲ ಯುದ್ಧದ ಕುರಿತು ಮಾತ್ರ ಮಾತನಾಡುತ್ತಿದ್ದೇನೆ.

ಸ್ವಲ್ಪ ಯೋಚಿಸಿ ನೋಡಿ. ಯುದ್ಧ ಯಾರಿಗೆ ಬೇಕು? ಯುದ್ಧದಿಂದ ನಾವು ಪಡೆದುಕೊಳ್ಳುವುದೇನಿದೆ? ಖಂಡಿತ ಏನೂ ಇಲ್ಲ ಆದರೆ ನಾವು ಕಳೆದುಕೊಳ್ಳುತ್ತೇವೆ, ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾವಿರಾರು ಸೈನಿಕರನ್ನು ನಾವು ಕಳೆದುಕೊಳ್ಳುತ್ತೇವೆ. ನಮ್ಮ ನಮ್ಮ ಮಾನಸಿಕ ಗೀಳುಗಳಿಗಾಗಿ ನಮ್ಮ ಹೆಮ್ಮೆಯ ಸೈನಿಕರನ್ನು ಬಲಿಕೊಡಲು ಯಾಕೋ ಮನಸ್ಸು ಒಪ್ಪುತ್ತಿಲ್ಲ‌ . ಹಿಂದಿನ ಯುದ್ಧಗಳ ಇತಿಹಾಸವನ್ನೊಮ್ಮೆ ನೆನಪಿಸಿಕೊಳ್ಳಿ ಯಾವ ಯುದ್ಧಗಳೂ ಸೈನಿಕರ ಸಾವಿಲ್ಲದೇ ಮುಕ್ತಾಯವಾಗಿಲ್ಲ. ಯಾವ ಯುದ್ಧದಿಂದಲೂ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಅದು 1962 ಭಾರತ ಆಗತಾನೆ ಗಟ್ಟಿಗೊಳ್ಳುತ್ತಿದ್ದ ಸಮಯ, ನೆರೆಯ ಚೀನಾದಂತ ಚೀನಾ ಮೇಲೆ ಯುದ್ಧ ಮಾಡಬೇಕಾಯ್ತು ಆ ಇಂಡೋ ಚೀನಾ ಯುದ್ಧದಲ್ಲಿ ನಾವು ಹಸಿಹಸಿ ಕನಸೊತ್ತ 1385 ಸೈನಿಕರನ್ನು ಕಳೆದುಕೊಳ್ಳಬೇಕಾಯ್ತು. ಮತ್ತೆ 1965ರಲ್ಲಿ ಪಾಕಿಸ್ತಾನ ನಮ್ಮ ವಿರುದ್ಧ ಕಾಲ್ಕೆರೆಯಿತು, ಆಗ ನಡೆದ ಯುದ್ಧದಲ್ಲಿ 3000 ಕುಟುಂಬಗಳು ತಮ್ಮ ಆಧಾರ ಸ್ಥಂಬಗಳನ್ನು ಕಳೆದುಕೊಂಡು ಕಂಗಾಲಾಗಬೇಕಾಯ್ತು. ಪಾಕಿಸ್ತಾನದ ಸೊಂಟ ಮುರಿದು ಇಬ್ಬಾಗ ಮಾಡಿದ ಸಮಯ 1971.

ಅದು ಸುಲಭಕ್ಕೆ ನಡೆದ ಕೆಲಸವಲ್ಲ, ನಾನು ಮತ್ತೆ ಯುಗಾದಿಗೆ ಬರ್ತೇನೆ, ಮುಂದಿನಬಾರಿ ಅಮ್ಮನಿಗೆ ಸೀರೆ ತರ್ತೇನೆ, ಇನ್ನೇನು ಎರಡೇ ತಿಂಗಳ ಡ್ಯೂಟಿ ಮುಗಿಸಿ ಊರಿಗೆ ಬಂದು ಅಮ್ಮನ ಸೇವೆ ಮಾಡಿಕೊಂಡಿರ್ತೇನೆ, ಹೀಗೆ ಎದೆಷ್ಟೋ ಭರವಸೆಯ ಮಾತುಗಳನ್ನು ಕುಟುಂಭದವರಿಗೆ ನೀಡಿ ಬಂದಿದ್ದ 3843ಜನ ಸೈನಿಕರು ನೋಡನೋಡುತ್ತಿದ್ದಂತೆಯೇ ಶತೃಗಳ ಗುಂಡಿಗೆ ಎದೆಕೊಡಬೇಕಾಯ್ತು. ಇನ್ನು 1999ರ ಕಾರ್ಗಿಲ್ ಕದನ. ಹಿಂದಿನ ದಿನವಷ್ಟೇ ಅಮ್ಮನಿಗೆ ಪತ್ರಬರೆದವರು, ಎರಡು ತಿಂಗಳ ಹಿಂದಷ್ಟೇ ಮದುವೆಯಾದವರ, ಇನ್ನೂ ನೋಡಿರದ ತನ್ನ ಕಂದಮ್ಮನ ಸುತ್ತ ಕನಸು ಹೆಣೆದವರೂ ಸೇರಿ ಸತ್ತ ಸೈನಿಕರ ಸಂಖ್ಯೆ 528. ಇಂದೋ ನಾಳೆಯೋ ಯುದ್ಧವಾದರೆ ಮತ್ತೆ ನಾವು ಕಳೆದುಕೊಳ್ಳುವ ಸಂಖ್ಯೆ ದೊಡ್ಡದಾಗುತ್ತದೆಯೇ ಹೊರತು ಚಿಕ್ಕದಾಗುವುದಿಲ್ಲ.

ನೆನಪಿರಲಿ ಗೆಳೆಯರೇ ಈಗ ಯುದ್ಧವಾದರೆ ಸಾಯುವವರು ದೇಶ ಕಾಯುವ ಸೈನಿಕರೇ ಹೊರತು, ಫೇಸ್ ಬುಕ್ಕಿನಲ್ಲಿ ಪೋಸ್ಟ್ ಹಾಕುವ ನಾವು ನೀವಲ್ಲ, ಒಂದು ಹನಿರಕ್ತಕ್ಕೆ ಹತ್ತು ಹೆಣ ಕೆಡವುತ್ತೇನೆಂದು ಪ್ರತಿಜ್ಞೆ ಮಾಡುವ ರಾಜಕಾರಣಿಗಳೂ ಅಲ್ಲ. ಗೊತ್ತಿರಲಿ ಯುದ್ಧದ ನಂತರ ನಾವು ಮತ್ತೆ ಫೇಸ್ ಬುಕ್ಕಿನಲ್ಲಿ ಸತ್ತವರ ಲೆಕ್ಕ ಹೇಳುತ್ತೇವೆ, ಅವರಿಗೆ ಶ್ರದ್ಧಾಂಜಲಿ ಕೋರಿ ಪೋಸ್ಟ್ ಹಾಕುತ್ತೇವೆ ಮತ್ತು ನಮ್ಮ ಜನನಾಯಕರು ಅವರ ಸಾವಿನ ಸೇಡುತೀರಿಸಿಕೊಳ್ಲಲು ಮತ್ತೊಂದು ಅವಕಾಶ ಕೊಡಿ ಎಂದು ಓಟು ಕೇಳಲು ಬರುತ್ತಾರೆ. ಯುದ್ಧದ ಕುರಿತಂತೆ ರೂಸ್ ವೆಲ್ಟ್ ಹೇಳಿದ ಮಾತೊಂದು ಈಗ ನೆನಪಾಗುತ್ತಿದೆ . “ಯುದ್ದವೆಂದರೆ ಯುವಕರು ಸಾಯುವುದು ಮತ್ತು ಹಿರಿಯರು ಭಾಷಣಮಾಡುವುದೆ ಹೊರತು ಮತ್ತೇನು ಅಲ್ಲ.”

ನಾನೊಬ್ಬ ಪತ್ರಕರ್ತನಾಗಿ ಸಾಕಷ್ಟುಜನ ಸೈನಿಕರನ್ನೂ, ಮತ್ತು ಸೈನಿಕರ ಕುಟುಂಬಗಳನ್ನೂ ಹತ್ತಿರದಿಂದ ಬಲ್ಲೆ, ಅವರಲ್ಲಿ ರಕ್ತದಾಹಿಗಳಿಲ್ಲ, ಸಾವಿಗಾಗಿ ಹಪಹಪಿಸಿದವರಿಲ್ಲ, ಕೊಂದು ಸೇಡುತೀರಿಸಿಕೊಳ್ಳಿ ಎಂದು ಯಾರೂ ಕೇಳಲಿಲ್ಲ. ಹಾಗಾದರೆ ಪಾಕಿಸ್ತಾನವನ್ನು ಸುಮ್ಮನೇ ಬಿಡಬೇಕಾ? ಖಂಡಿತಾ ಇಲ್ಲ. ಪಾಕಿಸ್ತಾನವಷ್ಟೇ ಅಲ್ಲ ಜಗತ್ತಿನ ಯಾವುದೇ ರಾಷ್ಟ್ರವಾಗಿರಲಿ ಭಾರತದ ಆತ್ಮಗೌರವವನ್ನು ಕೆಣಕಿದರೆ ಸುಮ್ಮನೇ ಬಿಡಬೇಕಿಲ್ಲ, ಮತ್ತು ನಾವು ಹಾಗೆ ಕೆಣಕಿದವರನ್ನು ಸುಮ್ಮನೇ ಬಿಟ್ಟ ಉದಾಹರಣೆಗಳೂ ಇಲ್ಲ. ಆದರೆ ನೆನಪಿರಲಿ ಈಗ ನಾವು ಕಾದಾಡಬೇಕಿರುವುದು ಪಾಕಿಸ್ತಾನದ ವಿರುದ್ಧವಲ್ಲ ಬದಲಾಗಿ ಭಯೋತ್ಪಾದನೆಯ ವಿರುದ್ಧ. ಪುಲ್ವಾಮಾದಲ್ಲಿ ಸೈನಿಕರ ರಕ್ತಹರಿಸಿದವರು ಭಯೋತ್ಪಾದಕರೇ ಹೊರತು ಪಾಕಿಸ್ತಾನದ ಸೈನಿಕರಲ್ಲ, ನಿಮಗೆ ಗೊತ್ತಿರಲಿ, ಪುಲ್ವಾಮಾ ಘಟನೆಯನ್ನು ಭಾರತದಂತೆಯೇ ಪಾಕಿಸ್ತಾನವೂ ಕೂಡ ಸಂಸತ್ ನಲ್ಲಿ ಖಂಡಿಸಿದೆ.

ಹಾಗಂತ ನಾವು ಪಾಕಿಸ್ತಾನವನ್ನು ಅಪ್ಪಿ ಮುದ್ದಾಡಬೇಕಿಲ್ಲ. ನಮ್ಮ ತಂಟೆಗೆ ಬಂದಾಗ ಕೈಕಟ್ಟಿ ಕೂರಬೇಕಿಲ್ಲ. ಬದಲಿಗೆಅದರ ರಕ್ತಕುಡಿಯಲು ಹಾತೊರೆಯುವುದರಲ್ಲೂ ಅರ್ಥವಿಲ್ಲ. ಹಾಗಾದರೆ ಮಾಡಬೇಕಿರುವುದೇನು? ದೇಶದ ಮೂಲೆ ಮೂಲೆಯಲ್ಲಡಗಿರುವ ಭಯೋತ್ಪಾದಕರನ್ನು ಮಟ್ಟಹಾಕವುದು ನಮ್ಮ ಗುರಿಯಾಗಬೇಕು. ಆನಿಟ್ಟಿನಲ್ಲಿ ನಾವು ನಮ್ಮ ಸರ್ಕಾರಗಳಿಗೆ ಒತ್ತಡಹೇರಬೇಕೇ ವಿನಃ ಯುದ್ಧ ಮಾಡಲಲ್ಲ. ಭಾರತ ಶಾಂತಿಪ್ರಿಯ ರಾಷ್ಟ್ರ. ಈ ದೇಶಕ್ಕೆ ತನ್ನದೇ ಆದ ಇತಿಹಾಸವಿದೆ, ಭಾರತ ಯಾರ ಮೇಲೂ ಕಾಲ್ಕೆರೆದು ಯುದ್ಧ ಮಾಡಿದ ಉದಾಹರಣೆಗಳಿಲ್ಲ, ಯಾವುದೋ ಉನ್ಮಾದದಲ್ಲಿ ಭಾರತ ಯುದ್ಧ ಘೋಷಣೆ ಮಾಡುವುದಿಲ್ಲ. ನಾವು ಗಾಂಧಿಯನ್ನು ನೆನಪಿಟ್ಟುಕೊಂಡಿದ್ದೇವೋ ಇಲ್ಲವೋ ಗೊತ್ತಿಲ್ಲ ಆದರೆ ಅಂತ ಗಾಂಧಿಯಂತ ಗಾಂಧಿ ಹುಟ್ಟಿದ ನೆಲದವರು ನಾವು. ನಮ್ಮ ರಾಷ್ಟ್ರಧ್ವಜದ ಬಿಳಿಯ ಬಣ್ಣ ಶಾಂತಿ ಸಂಕೇತ ಎಂದು ನಾವು ಹೇಳಿಕೊಳ್ಳುತ್ತೇವೆ ಆದರೆ ಈಗ ನಾವು ನಡೆದುಕೊಳ್ಳುತ್ತಿರುವ ರೀತಿ ಯಾವುದು? ತಾನಾಗೆ ಬಂದ ಯಾರನ್ನೂ ಸುಮ್ಮನೇ ಉಳಿಸಿದ ಉದಾಹರಣೆಗಳೂ ಇತಿಹಾಸದ ಯಾವ ಮೂಲೆಯಲ್ಲೂ ಸಿಗುವುದಿಲ್ಲ. ನಮ್ಮ ಸೈನಿಕರಿರುವುದು ಕಾಯುವುದಕ್ಕೇ ಹೊರತು ಯಾರನ್ನೋ ಕೊಲ್ಲುವುದಕ್ಕಲ್ಲ. ರಕ್ಷಿಸುವ ಕೈಗಳನ್ನು ರಕ್ತ ಕುಡಿಯುವಂತೆ ಒತ್ತಾಯಿಸಬೇಕಿಲ್ಲ. ಕೊನೆಯದಾಗಿ ಯುದ್ಧದ ಕುರಿತು ಧೀರ ಯೋಧ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಕೆ. ಉನ್ನಿಕೃಷ್ಣನ್ ಹೇಳಿರುವ ಮಾತುಗಳನ್ನು ಯಥಾವತ್ತಾಗಿ ಹೇಳುತ್ತೇನೆ ಕೇಳಿ,

ನಾವೀಗ ಒಂದು ಸುಧೀರ್ಘದಾರಿಯ ದೊಡ್ಡ ತಿರುವಿನಲ್ಲಿದ್ದೇವೆ. ನಾವು ಪಾಕಿಸ್ತಾನದೊಂದಿಗೆ ಗುದ್ದಾಟದಲ್ಲಿಲ್ಲ, ಭಯೋತ್ಪಾದಕರೊಂದಿಗಿನ ಗುದ್ದಾಟದಲ್ಲಿದ್ದೇವೆ ಎಂದು ಹಲವರು ಹೇಳುತ್ತಾರೆ ಅದೇನೇ ಇರಲಿ, ದೇಶದಲ್ಲಿ ಏನಾಗುತ್ತಿದೆ ಎಂದು ನಾನು ಸುಮ್ಮನೇ ಗಮನಿಸುತ್ತಿದ್ದೇನೆ. ಈಗಾಗುತ್ತಿರುವ ಬೆಳವಣಿಗೆಗಳಿಂದ ಪಾಕಿಸ್ತಾನ ಏನನ್ನೂ ಕಳೆದುಕೊಳ್ಲುತ್ತಿಲ್ಲ, ಅವರು ಕಳೆದುಕೊಳ್ಳುತ್ತಿರುವುದು ಸಾಯಲು ಸಿದ್ದವಾಗಿರುವ ಭಯೋತ್ಪಾದಕರನ್ನು ಮಾತ್ರ. ಆದರೆ ನಾವು? ನಾವು ನಮ್ಮ ಭಾರತದ ಹೆಮ್ಮೆಯ ಸೈನಿಕರನ್ನು ಕಳೆದುಕೊಳ್ಲುತ್ತಿದ್ದೇವೆ. ಆ ಭಯೋತ್ಪಾದಕರಿಗೂ ನಮ್ಮ ಸೈನಿಕರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ನಾವು ನಮ್ಮ ಶತೃಗಳ ಸಾವನ್ನೂ ಸಂಭ್ರಮಿಸಲಾಗುವುದಿಲ್ಲ, ಅದು ನಮ್ಮ ಭಾರತದ ಸಂಸ್ಕತಿಯೂ ಅಲ್ಲ. ನಾವೀಗ ಬಹಲ ಜಾಗೃತವಾಗಿರಬೇಕು, ನಾವು ಯಾರ ಸಾವನ್ನೂ ಸಂಭ್ರಮಿಸಬಾರದು, ಅದು ನಮ್ಮ ಶತೃವಿನ ಸಾವಾಗಿದ್ದರೂ ಕೂಡ. ಯಾಕೆಂದರೆ ಯಾರ ಮನೆಯಲ್ಲಾದರೂ ಸಾವು ಸಾವೇ.

ಇದು ನನ್ನ ವೈಯಕ್ತಿಕ ಅನಿಸಿಕೆ. ಅನಿವಾರ್ಯತೆ ಬಂದಾಗ ಮಾತ್ರವೇ ನಾವು ಕೊಲ್ಲಬೇಕಾಗುತ್ತದೆ. ನಾವು ತಿಳಿದುಕೊಂಡಿರುವಂತೆ ನಮ್ಮ ಸೈನ್ಯ ಇರುವುದು ಯಾರನ್ನೋ ಕೊಲ್ಲುವುದಕ್ಕಲ್ಲ, ಅವರ ಕರ್ತವ್ಯವೇ ನಮ್ಮನ್ನು ಕಾಯುವುದು. “ನಮ್ಮನ್ನು ಕೊಲ್ಲುವವರಂತೆ ನೋಡಬೇಡಿ, ನಾವು ದೇಶಕ್ಕಾಗಿ ಕೆಲವೊಮ್ಮೆ ಕೊಲ್ಲಬಹುದು ಆದರೆ ನಮ್ಮ ಕೆಲಸ ಕೊಲ್ಲುವುದಲ್ಲ ಬದಲಾಗಿ ದೇಶ ಕಾಯುವುದು, ನಾವು ಅಲ್ಲಿರುವುದು ಯಾರನ್ನಾದರೂ ಕೊಲ್ಲುವುದಕ್ಕಲ್ಲ. ಕೊಲ್ಲುವವರನ್ನು ತಡೆಯುವುದಕ್ಕೆ ಎಂದು ಸಂದೀಪ್ ಉನ್ನಿಕೃಷ್ಣನ್ ಸದಾ ಹೇಳುತ್ತಿದ್ದರು.” ನೆನಪಿರಲಿ ಭಾರತ ತಾನಾಗಿಯೇ ಹೋಗಿ ಯಾರನ್ನೂ ಕೊಂದ ಇತಿಹಾಸವಿಲ್ಲ. ಇದು ಕೆ. ಉನ್ನಿಕೃಷ್ಣನ್ ಅವರ ಮಾತು, ದಯಮಾಡಿ ಸ್ವಲ್ಪ ಯೋಚಿಸಿ.

ಭಾರತ ಬೌದ್ಧಿಕವಾಗಿ ಹಿಂದೆಂದೂ ಕಾಣದಷ್ಟು ಇಬ್ಬಾಗವಾಗುತ್ತಿದೆ. ಅದಕ್ಕೆ ಕಾರಣ ನಮ್ಮ ಸಿದ್ಧಾಂತಗಳು, ಧರ್ಮ, ರಾಜಕೀಯ ಮತ್ತೇನೇನೋ,,, ಈದೇಶದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುವವರಾರನ್ನೂ ಸುಮ್ಮನೆ ಬಿಡಬೇಕಿಲ್ಲ, ಹಾಗೆಂದು ಯಾರದೋ ತಪ್ಪಿಗೆ ಮತ್ತಾರನ್ನೋ ಶಿಕ್ಷಿಸುವುದೂ ತರವಲ್ಲ. ದೇಶದ ಭದ್ರತೆ, ಸೇನೆ, ಸೈನಿಕರ ತ್ಯಾಗ, ದೇಶಭಕ್ತಿಯ ವಿಚಾರಬಂದಾಗ ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತಾರೆ ಅದು ನಮ್ಮ ದೇಶಧ ಸೌಂದರ್ಯ. ಹಿಂದೆ ಪಾಕಿಸ್ತಾನದ ವಿರುದ್ದ ನಡೆದ ಮೂರೂ ಯುದ್ಧಗಳಲ್ಲೂ ನಾವು ಗೆದ್ದಿದ್ದೇವೆ. ಮತ್ತು ನಾಳೆ ಯುದ್ಧ ನಡೆದರೂ ನಾವು ಗೆಲ್ಲುತ್ತೇವೆ ಅದು ಭಾರತದ ತಾಕತ್ತು. ಮುಂದೆಯು ಅಷ್ಟೆ ಅಧಿಕಾರದಲ್ಲಿ ಕಾಂಗ್ರೆಸ್ ಇರಲಿ ಅಥವಾ ಬಿಜೆಪಿಯಿರಲಿ ನಾವು ದೇಶದ ಪರವಾಗಿರೋಣ. ನೆನಪಿರಲಿ ದೇಶ ಎಂದರೆ ದೇಶದ ಜನರೇ ಹೊರತು ಆಳುವವರು ಮತ್ತು ಪಕ್ಷಗಳಲ್ಲ.

ದರ್ಶನ್ ಆರಾಧ್ಯ
ಪತ್ರಕರ್ತ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ...

ದಿನದ ಸುದ್ದಿ1 day ago

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ...

ಅಂಕಣ3 days ago

ಕವಿತೆ | ಅಲರ್ಟ್..!

ಸುನೀತ ಕುಶಾಲನಗರ ನದಿಯ ನೇವರಿಸಿದ ಗಾಳಿ ಮುದಗೊಳಿಸಿ ಸರಿಯಿತು. ಜಡಿ ಮಳೆ ಧೋ ಎಂದು ಸಕಾಲಿಕವಾಗಿ ಸುರಿದು ಹೊಸ ಹುಟ್ಟು. ಆದರೇನು? ಹಿಂಗಾರು, ಮುಂಗಾರು ಆಗೊಮ್ಮೆ ಈಗೊಮ್ಮೆ...

ದಿನದ ಸುದ್ದಿ6 days ago

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ...

ದಿನದ ಸುದ್ದಿ6 days ago

ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:2024-25 ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜರುಗಲಿವೆ. ಹೊಸದಾಗಿ ಒಟ್ಟು 21704 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ 10587...

ಅಂಕಣ6 days ago

ಸಿದ್ಧಾಂತ ಮತ್ತು ಪತ್ರಿಕೋದ್ಯಮ

ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್ ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು....

ದಿನದ ಸುದ್ದಿ6 days ago

ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಮಕ್ಕಳ ಮಾರಾಟ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಸಂಧರ್ಭದಲ್ಲಿ ಮೈಸೂರಿನಲ್ಲೊಂದು ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. 14ಸಾವಿರ ರೂ ಗೆ ಹೆಣ್ಣು...

ದಿನದ ಸುದ್ದಿ6 days ago

ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ

(ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಅಡಿಯಲ್ಲಿ ಆಯೋಜನೆ) ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ನೇತೃತ್ವದಲ್ಲಿ ಖ್ಯಾತ ಐಟಿ ತರಬೇತಿ...

ದಿನದ ಸುದ್ದಿ7 days ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ1 week ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

Trending