Connect with us

ದಿನದ ಸುದ್ದಿ

ತಳಿ ಶಾಸ್ತ್ರಜ್ಞ ಸ್ವಾಂಟೆ ಪಾಬೊಗೆ ನೋಬೆಲ್ ಪರಸ್ಕಾರ

Published

on

ಸುದ್ದಿದಿನ ಡೆಸ್ಕ್ : ತಮ್ಮ ಅಳಿದುಹೋದ ಪೂರ್ವಜರಿಂದ ನವಯುಗದ ಮಾನವರು ಹೇಗೆ ಅಭಿವೃದ್ಧಿ ಹೊಂದಿದ್ದಾರೆ ಎಂದು ಅರಿತುಕೊಳ್ಳಲು ಮಾಹಿತಿಯನ್ನು ಒದಗಿಸುವ ಔಷಧಿ ಅಥವಾ ಶರೀರ ಶಾಸ್ತ್ರದ ಕುರಿತ ಅನ್ವೇಷಣೆಗೆ ಸ್ವಿಡನ್ನಿನ ತಳಿ ಶಾಸ್ತ್ರಜ್ಞ ಸ್ವಾಂಟೆ ಪಾಬೊ ( Swedish scientist Svante Paabo )‌ಅವರಿಗೆ 2022ನೇ ಸಾಲಿನ ಪ್ರತಿಷ್ಠಿತ ನೋಬಲ್ ಪುರಸ್ಕಾರ ( Nobel prize ) ಲಭಿಸಿದೆ.

ಇವರ ಆವಿಷ್ಕಾರಗಳು ಮಾನವನ ರೋಗ ನಿರೋಧಕ ಶಕ್ತಿ ಮತ್ತು ಅಳಿದು ಹೋದ ಸೋದರ ಸಂಬಂಧಿಗಳಿಗೆ ಹೋಲಿಸಿದರೆ ಮಾನವರ ವಿಶಿಷ್ಟತೆ ಏನು ಎಂಬುದರ ಬಗ್ಗೆಯೂ ಸೂಕ್ಷ್ಮ ಮಾಹಿತಿ ಒದಗಿಸುತ್ತವೆ ಎಂದು ಪ್ರಶಸ್ತಿ ಆಯ್ಕೆ ಮಂಡಳಿ ತಿಳಿಸಿದೆ. ಪೂರ್ವಜರು ಮತ್ತು ಆಧುನಿಕ ಯುಗದ ಮಾನವರ ಮಧ್ಯೆ ಇರುವ ಸಂಬಂಧವನ್ನು ತಿಳಿಯಪಡಿಸುವ ಸಂಪೂರ್ಣ ನಿಯಾಂಡೆರ್ಥಲ್ ಜಿನೋಮ್ ಅನ್ನು ಅನುಕ್ರಮಗೊಳಿಸುವ ಪ್ರಮುಖ ಸಾಧನೆಯನ್ನು ಪಾಬೋಸ್ ಮಾಡಿದ್ದಾರೆ.

ಜರ್ಮನಿಯ ಮ್ಯುನಿಚ್ ವಿಶ್ವವಿದ್ಯಾಲಯದಲ್ಲಿ ಮತ್ತು ಲೀಪ್‌ಜಿಂಗ್‌ನ ಮ್ಯಾಕ್ಸ್ ಪ್ಲಾಂಕ್ ಸಂಸ್ಥೆಯಲ್ಲಿ ವಿಕಸನೀಯ ಮಾನವಶಾಸ್ತ್ರ ಕುರಿತು 67ವಯೋಮಾನದ ಪಾಬೊ ತಮ್ಮ ಪ್ರಶಸ್ತಿ ವಿಜೇತ ಅಧ್ಯಯನವನ್ನು ಮಾಡಿದ್ದಾರೆ. ಪಾಬೊ 1982 ರಲ್ಲಿ ನೋಬಲ್ ಪ್ರಶಸ್ತಿ ವಿಜೇತ ಸುನೆ ಬರ್ಗ್‌ಸ್ಟ್ರೋಮ್ ಅವರ ಸುಪುತ್ರರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending