ರಾಜಕೀಯ
ಉತ್ತರ ಕರ್ನಾಟಕ ಬಂದ್ ಬಿಜೆಪಿ ಪ್ರಯೋಜಿತ : ಡಿಕೆಶಿ ವ್ಯಂಗ್ಯ

ಸುದ್ದಿದಿನ ಡೆಸ್ಕ್: ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕೆಲ ಸಂಘಟನೆಗಳು ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ಬಿಜೆಪಿ ಪ್ರಾಯೋಜಿತವಾಗಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ರಾಜ್ಯ ಇಬ್ಭಾಗ ಮಾಡಲು ಹೊರಟಿರುವ ಬಿಜೆಪಿ ನಾಯಕರು ಉತ್ತರ ಕರ್ನಾಟಕ ಬಂದ್ ಗೆ ಪ್ರೇರಣೆ ನೋಡಿದ್ದಾರೆ. ಖಂಡಿತ ಇದು ಬಿಜೆಪಿ ಪಕ್ಷದ ಪ್ರಾಯೋಜಿತ ಬಂದ್ ಆಗಿದೆ. ಬಂದ್ ಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ನಾವು ರಾಜ್ಯ ಇಬ್ಬಾಗ ಮಾಡಲು ಬಿಡುವುದಿಲ್ಲ. ಅಖಂಡ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಆದ್ಯತೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.
ಈ ತಿಂಗಳ 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಈ ತಿಂಗಳ 13ರಂದು ಅದಿಸೂಚನೆ ಪ್ರಕಟವಾಗಲಿದೆ.
ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.
ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.
ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.
18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.
ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.
ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ

ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.
ಈ ಯೋಜನೆಗಳ ಜಾರಿ ಹೇಗೆ, ಫಲಾನುಭವಿಗಳ ಆಯ್ಕೆ ಮಾನದಂಡ, ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ