ದಿನದ ಸುದ್ದಿ
ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ಸೂಚನೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಸಹಾಯಧನ ನೀಡಲಾಗುವುದು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ರೈತರಿಗೆ ಶೇ.90 ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಶೇ.45 ರಷ್ಟು ಸಹಾಯಧನ ಲಭ್ಯವಿದ್ದು, ಸಣ್ಣ ಮತ್ತು ಅತಿಸಣ್ಣ ರೈತರು ಕಡ್ಡಾಯವಾಗಿ ಕಂದಾಯ ಇಲಾಖೆಯಿಂದ ನೀಡುವ ಸಣ್ಣ, ಅತಿಸಣ್ಣ ಹಿಡುವಳಿದಾರರ ದೃಡೀಕರಣ ಪತ್ರ, ಪಹಣಿ, ಆಧಾರ್‍ಕಾರ್ಡ್, ಬ್ಯಾಂಕ್ ವಿವರಗಳೊಂದಿಗೆ ದಾವಣಗೆರೆ ತಾಲ್ಲೂಕು ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಆನಗೋಡು ಮೊ.ಸಂ:7019819101, ಮಾಯಕೊಂಡ ಮೊ.ಸಂ: 9902866619,8722551293,7899445111, ಕಸಬಾ ಮೊ.ಸಂ: 7022244152 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243