ರಾಜಕೀಯ

ಮೇಲ್ಮನೆಯ 7 ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಪ್ರಕಟ ; ನಾಮಪತ್ರ ಸಲ್ಲಿಸಲು ಇದೇ 24 ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆಯ ಕಾರ್ಯದರ್ಶಿಯು ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ.

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 24ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 27ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಅಗತ್ಯ ಬಿದ್ದಲ್ಲಿ ಜೂನ್ 3ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರುತ್ತದೆ.
5ಗಂಟೆಯ ನಂತರ ಮತಗಳ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರ ಅನುಮೋದನೆಗೆ ದೆಹಲಿಗೆ ರವಾನಿಸಿದ್ದು, ಅನುಮೋದನೆಯ ನಂತರ ಅಧಿಕೃತ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ರಾಜಕೀಯ ಪಕ್ಷಗಳ ವಕ್ತಾರರು ಹೇಳಿದ್ದಾರೆ.

ವಿಧಾನಪರಿಷತ್ತಿನ 7ಸ್ಥಾನಗಳಲ್ಲಿ ಪಕ್ಷದ ಸಂಖ್ಯಾಬಲಕ್ಕೆ ಅನುಗುಣವಾಗಿ ಬಿಜೆಪಿ 4ಸ್ಥಾನ, ಕಾಂಗ್ರೆಸ್ 2 ಸ್ಥಾನ ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲಲು ಬೇಕಾಗುವ ಸದಸ್ಯರಿದ್ದು, ಅವಿರೋಧ ಆಯ್ಕೆಯ ಬಗ್ಗೆ ರಾಜಕೀಯ ಪಕ್ಷಗಳು ಒಲವು ತೋರಿವೆ ಎಂದು ವರದಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version