Connect with us

ದಿನದ ಸುದ್ದಿ

ಅಸ್ಸಾಮ್‌ನಲ್ಲಿ ಎನ್‌ಆರ್‌ಸಿ ಪ್ರಕ್ರಿಯೆ ಎತ್ತ ಸಾಗಿದೆ..? ಪೌರತ್ವ ನಿರ್ಧಾರದಲ್ಲಿ ಕೋಮುವಾದಿ ಹುನ್ನಾರ..!

Published

on

  • ಸವಿದೇಶಿಯರನ್ನು ಹೊರತುಪಡಿಸಿ ಎಲ್ಲಾ ಭಾರತೀಯರನ್ನು ಸೇರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಸ್ಸಾಮ್‌ನ ಎನ್‌ಆರ್‌ಸಿ ಪ್ರಕ್ರಿಯೆಯನ್ನು ಈಗ ಬಿಜೆಪಿಯ ಕೋಮುವಾದಿ ಹಾಗೂ ಸಂಕುಚಿತ ಉದ್ದೇಶಕ್ಕೆ ಅಪಹರಿಸುವ ಅಪಾಯವಿದೆ. ಕೋಮುವಾದದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವ ಕ್ರಮ ಅಸಂವಿಧಾನಿಕವಾದುದು ಹಾಗೂ ವಿಭಜನಕಾರಿಯಾದುದು. ಅಲ್ಲದೆ ಎನ್‌ಆರ್‌ಸಿಯ ದೋಷಪೂರಿತ ಅನುಷ್ಠಾನದಿಂದ ಉದ್ಭವಿಸುವ ಅವಾಂತರಗಳನ್ನು ಪರಿಹರಿಸಲು ವಿಫಲವಾದರೆ ಅದು ಪೌರರ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಮನಾಗುತ್ತದೆ. ಇದರಿಂದ ಭಾರತ ಒಂದು ಪ್ರಜಾಪ್ರಭುತ್ವ ಮತ್ತು ಕಾನೂನು ಪಾಲಿಸುವ ಸಮಾಜ ಎಂಬ ಘನತೆಗೆ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಕಳಂಕ ಬರುತ್ತದೆ.

ಸ್ಸಾಮ್‌ನಲ್ಲಿ ನಾಗರಿಕ ಗಣತಿ ನಡೆಸುವ ರಾಷ್ಟ್ರೀಯ ಪೌರತ್ವ ದಾಖಲೆ (ಎನ್‌ಆರ್‌ಸಿ)ಯ ಪ್ರಕ್ರಿಯೆ ಸುಪ್ರೀಂ ಕೋರ್ಟ್‌ನ ಆದೇಶದ ಅನ್ವಯ ಜುಲೈ 31ರಂದು ಅಂತಿಮ ಪಟ್ಟಿಯ ಪ್ರಕಟಣೆಯೊಂದಿಗೆ ಪೂರ್ಣಗೊಳ್ಳುವ ಹಂತ ತಲುಪಬೇಕಾಗಿದೆ. ಈ ಪ್ರಕ್ರಿಯೆಯನ್ನು ನಡೆಸಿದ ರೀತಿ ಅನೇಕ ಅನುಮಾನಗಳಿಗೆ ಎಡೆಮಾಡಿದೆ; ದಾಖಲೆಯಲ್ಲಿ ನೈಜ ಭಾರತೀಯ ನಾಗರಿಕರನ್ನು ಸೇರಿಸುವ ವಿಚಾರದಲ್ಲಿ ಭಾರೀ ಪ್ರಮಾಣದ ಲೋಪದೊಷಗಳು ಕಂಡುಬಂದಿವೆ.

2018ರ ಜುಲೈ 30ರಂದು ಪ್ರಕಟವಾದ ಎನ್‌ಆರ್‌ಸಿ ಕರಡು ಪಟ್ಟಿಯಲ್ಲಿ 3.29 ಕೋಟಿ ಅರ್ಜಿದಾರರ ಪೈಕಿ 40.7 ಲಕ್ಷ ಜನರನ್ನು ಕೈಬಿಡಲಾಗಿತ್ತು. ನಿಯಮದ ಪ್ರಕಾರ, ಪಟ್ಟಿಯಿಂದ ಬಿಡಲಾದವರು ತಮ್ಮ ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದೇ ರೀತಿ ಸೇರ್ಪಡೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲೂ ಅವಕಾಶವಿದೆ.

ಈ ಪ್ರಕ್ರಿಯೆಯ ನಂತರ, ಪಟ್ಟಿಯನ್ನು ಅಂತಿಮಗೊಳಿಸಿ 2019ರ ಜುಲೈ 31ರಂದು ಪ್ರಕಟಿಸಲು ಕ್ರಮಕೈಗೊಳ್ಳಲಾಗಿತ್ತು. ಆದರೆ, ಈ ವರ್ಷ ಜೂನ್ ೨೬ರಂದು ಅನರ್ಹರು ಎಂದು ಹೇಳಿ ಅಧಿಕಾರಿಗಳು ಮತ್ತೆ 1,02,462 ಹೆಸರುಗಳನ್ನು ಕರಡು ಎನ್‌ಆರ್‌ಸಿ ಪಟ್ಟಿಯಿಂದ ಕೈಬಿಟ್ಟಿದ್ದರು. ಪ್ರಸ್ತುತ ಹೊರತುಪಡಿಸುವಿಕೆಯು ಡಿ, ಅಂದರೆ ಮತದಾರರ ಪಟ್ಟಿಯ ಅನುಮಾನಾಸ್ಪದ (ಡೌಟ್‌ಫುಲ್) ವಿಭಾಗದಲ್ಲಿ ಸೇರಿದವರನ್ನೂ ಒಳಗೊಂಡಿದೆ ಅಥವಾ ವಿದೇಶಿಯರೆಂದು ಅನುಮಾನಕ್ಕೊಳಗಾಗಿದ್ದು ವಿದೇಶಿಯರ ನ್ಯಾಯಮಂಡಳಿಯ ಮುಂದೆ ವಿಚಾರಣೆ ಎದುರಿಸುತ್ತಿರುವವರನ್ನೂ ಒಳಗೊಂಡಿದೆ ಎಂದು ತಿಳಿಸಲಾಗಿದೆ. ಈ ಹೆಚ್ಚುವರಿ ಹೊರತುಪಡಿಸುವಿಕೆಯೇ ಇನ್ನಷ್ಟು ಪ್ರಶ್ನೆಗಳಿಗೆ ಕಾರಣವಾಗಿದೆ. ಯಾಕೆಂದರೆ ಡಿ ವಿಭಾಗದಲ್ಲಿರುವ ಎಲ್ಲ ವ್ಯಕ್ತಿಗಳನ್ನು ಹೊರತು ಪಡಿಸಲಾಗಿದೆ ಎಂದು ಕರಡು ಎನ್‌ಆರ್‌ಸಿ ವೇಳೆಯೇ ಘೋಷಿಸಲಾಗಿತ್ತು.

ಪ್ರಕ್ರಿಯೆಯು ದೋಷಪೂರಿತವಾಗಿದೆ ಹಾಗೂ ಅನೇಕ ತಪ್ಪುಗಳೂ ನಡೆದಿವೆ ಎಂಬುದನ್ನು ಮಾಧ್ಯಮಗಳಲ್ಲಿ ಪ್ರಕಟವಾದ ಅನೇಕ ವರದಿಗಳು ಎತ್ತಿತೋರಿಸಿವೆ. ಸೇನೆಯಲ್ಲಿ 30 ವರ್ಷ ಸೇವೆ ಸಲ್ಲಿಸಿ ಆನಂತರ ಗಡಿ ಪೊಲೀಸ್ ಪಡೆಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ ನಾನ್-ಕಮಿಷನ್ಡ್ ಆಫೀಸರ್ ಮಹಮದ್ ಸನಾವುಲ್ಲಾ ಪ್ರಕರಣ ಒಂದು ಉದಾಹರಣೆಯಾಗಿದೆ. ಅವರ ಹೆಸರು ಡಿ ಪಟ್ಟಿಯಲ್ಲಿತ್ತು ಹಾಗೂ ಅವರನ್ನು ವಿದೇಶೀಯ ಎಂದು ವಿದೇಶಿಗರ ನ್ಯಾಯಮಂಡಳಿ (ಫಾರಿನರ್ಸ್ ಟ್ರಿಬ್ಯುನಲ್) ಘೋಷಿಸಿತು. ಸನಾವುಲ್ಲಾ ಅಸ್ಸಾಮ್‌ನಲ್ಲಿ ಹುಟ್ಟಿದವರಾದರೂ ಮತ್ತು ಹುಟ್ಟಿದ ಊರಿನಲ್ಲಿ ಕುಟುಂಬದ ಬೇರುಗಳು ಆಳವಾಗಿದ್ದರೂ ಈ ರೀತಿ ಮಾಡಲಾಯಿತು. ಅವರನ್ನು ಪ್ರತಿಬಂಧನ ಶಿಬಿರಕ್ಕೆ ಕಳಿಸಲಾಯಿತು. ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದ ನಂತರವಷ್ಟೇ ಹತ್ತು ದಿನಗಳ ನಂತರ ಅವರು ಹೊರಬರುವುದು ಸಾಧ್ಯವಾಯಿತು.

ಸುನಿರ್ಮಲ್ ಬಾಗ್ಚಿ ಅವರದ್ದು ಇನ್ನೊಂದು ಪ್ರಕರಣ. 2018ರ ಜುಲೈನಲ್ಲಿ ಪ್ರಕಟಿಸಲಾದ ಕರಡು ಪಟ್ಟಿಯಲ್ಲಿ ಅವರ ಹೆಸರಿತ್ತು. ಆದರೆ ಈ ವರ್ಷ ಜೂನ್‌ನಲ್ಲಿ ಪ್ರಕಟಿಸಲಾದ ಹೆಚ್ಚುವರಿ ಹೊರತುಪಡಿಸುವಿಕೆ ಪಟ್ಟಿಯಲ್ಲಿ ಅವರ ಹೆಸರನ್ನು ಕರಡು ಪಟ್ಟಿಯಿಂದ ಹೊಡೆದುಹಾಕಲಾಗಿದೆ. ಆತ ಒಬ್ಬ ವಿದೇಶಿ ಎಂದು ಘೋಷಿಸಲಾಗಿದೆ ಎನ್ನುವುದು ಇದಕ್ಕೆ ನೀಡಲಾದ ಕಾರಣವಾಗಿದೆ. ಬಾಗ್ಚಿ ಅವರು ಸಿಲ್ಚಾರ್ ಪಟ್ಟಣದಲ್ಲಿ 1943 ಸೆಪ್ಟೆಂಬರ್ 23ರಂದು ಜನಿಸಿದವರು. ಹಾಗಿರುವಾಗ ಅವರು ಒಬ್ಬ ವಿದೇಶೀಯ ಆಗಲು ಹೇಗೆ ಸಾಧ್ಯ ಎನ್ನುವುದಕ್ಕೆ ಅಧಿಕಾರಿಗಳಲ್ಲಿ ಉತ್ತರವಿಲ್ಲ. ಆದರೆ ಇದೊಂದು ಕ್ಲರಿಕಲ್ ದೋಷದ ಪರಿಣಾಮ ಎಂದು ಎನ್‌ಆರ್‌ಸಿ ಅಧಿಕಾರಿಗಳು ಈಗ ಹೇಳುತ್ತಿದ್ದಾರೆ.

ಚಿರಾಂಗ್ ಜಿಲ್ಲೆಯ ಒಬ್ಬ ಬಡ ವಿಧವೆ ಮಧುಬಾಲಾ ಅವರನ್ನು ಬಂಧಿಸಿರುವುದು ಒಂದು ಕಳವಳಕಾರಿ ಸಂಗತಿಯಾಗಿದೆ. ಫಾರಿನರ್ಸ್ ಟ್ರಿಬ್ಯುನಲ್ ಅವರನ್ನು ವಿದೇಶಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮಧುಬಾಲಾರನ್ನು ಮೂರು ವರ್ಷಗಳಿಂದ ಪ್ರತಿಬಂಧನದಲ್ಲಿಡಲಾಗಿತ್ತು. ಮಧುಬಾಲಾ ಎಂಬ ಹೆಸರಿನ ಮತ್ತೊಬ್ಬ ಮಹಿಳೆಯ ವಿಚಾರದಲ್ಲಿ ತಪ್ಪಾಗಿ ತಿಳಿದು ಈ ಮಧುಬಾಲಾರನ್ನು ಹಿಡಿದಿಡಲಾಗಿತ್ತು ಎನ್ನುವುದು ಇತ್ತೀಚೆಗೆ ತಿಳಿದು ಅವರ್ನು ಬಿಡುಗಡೆ ಮಾಡಲಾಯಿತು. ಆದರೆ, ಅಕ್ರಮವಾಗಿ ಅವರನ್ನು ಬಂಧಿಸಿಟ್ಟಿದ್ದಕ್ಕೆ ಪರಿಹಾರ ನೀಡಲಾಗುವುದೇ ಎಂಬ ಬಗ್ಗೆ ಎಂದು ಚಕಾರವನ್ನೇ ಎತ್ತಿಲ್ಲ.

ಮಗನನ್ನು ಪಟ್ಟಿಯಲ್ಲಿ ಸೇರಿಸಿ ತಂದೆಯನ್ನು ಕೈಬಿಟ್ಟ ಅಥವಾ ಒಡಹುಟ್ಟಿದವರಲ್ಲಿ ಒಬ್ಬರನ್ನು ಸೇರಿಸಿ ಇನ್ನೊಬ್ಬರನ್ನು ಬಿಟ್ಟ ಈ ರೀತಿಯ ಅನೇಕಾನೇಕ ಪ್ರಕರಣಗಳು ಇಲ್ಲಿವೆ.

ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರಿಂದ ಮುಕ್ತಿ ಪಡೆಯಬೇಕು ಎಂದು ಕೇಂದ್ರದ ಬಿಜೆಪಿ ಸರಕಾರ ಸದಾ ಜಪಿಸುತ್ತಲೇ ಇದೆ. ಈಗ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಚುನಾವಣೆ ಪ್ರಚಾರದ ವೇಳೆ ಇವರನ್ನು ಗೆದ್ದಲು ಎಂದು ಕರೆದಿದ್ದರು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಗಡಿಗೆ ಹೊಂದಿರುವ ರಾಜ್ಯಗಳಿಗೆ ಎನ್‌ಆರ್‌ಸಿ ವಿಸ್ತರಿಸಲು ಮೋದಿ ಸರಕಾರ ಕಟಿಬದ್ಧವಾಗಿದೆ. ಮುಸ್ಲಿಂ ಮೂಲದ ನಾಗರಿಕರನ್ನು ಗುರಿಯಾಗಿಸಲಾಗುವುದು ಎಂಬ ಭೀತಿ ಕಾಡತೊಡಗಿದೆ.

ಇದೇ ಹೊತ್ತಿಗೆ ಬಾಂಗ್ಲಾದೇಶದಿಂದ ಬಂದ ಹಿಂದೂ ವಲಸಿಗರಿಗೆ ಪೌರತ್ವ ಕಾನೂನನ್ನು ತಿದ್ದುಪಡಿ ಮಾಡುವ ಮೂಲಕ ಪೌರತ್ವ ನೀಡಲಾಗುವುದು ಎಂದು ಬಿಜೆಪಿ ಆಶ್ವಾಸನೆ ನೀಡುತ್ತಿದೆ. ಎನ್‌ಆರ್‌ಸಿಯಿಂದ ಕೈಬಿಟ್ಟ ಹಿಂದೂ ನಿರಾಶ್ರಿತರಿಗೆ ಪೌರತ್ವ ನೀಡಲಿಕ್ಕಾಗಿ ಸರಕಾರ ಒಂದು ಮಸೂದೆ ತರಲಿದೆ ಎಂದು ಗೃಹ ಸಚಿವ ಅಮಿತ್ ಷಾ ಜುಲೈ ಒಂದರಂದು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ವಿದೇಶಿಯರನ್ನು ಹೊರತು ಪಡಿಸಿ ಎಲ್ಲಾ ಭಾರತೀಯರನ್ನು ಸೇರಿಸಿ ಕೊಳ್ಳುವ ಉದ್ದೇಶ ಹೊಂದಿದ್ದ ಎನ್‌ಆರ್‌ಸಿ ಪ್ರಕ್ರಿಯೆಯನ್ನು ಈಗ ಬಿಜೆಪಿಯ ಕೋಮುವಾದಿ ಹಾಗೂ ಸಂಕುಚಿತ ಉದ್ದೇಶಕ್ಕೆ ಅಪಹರಿಸುವ ಅಪಾಯವಿದೆ.
ಅಸ್ಸಾಮ್‌ನಲ್ಲಿ ಎನ್‌ಆರ್‌ಸಿ ಪ್ರಕ್ರಿಯೆ ಅನೇಕ ಪ್ರಶ್ನೆಗಳನ್ನು ಎತ್ತಿದ್ದು ಅವುಗಳಿಗೆ ಪರಿಹಾರ ಸಿಗಬೇಕಾಗಿದೆ. ಎನ್‌ಆರ್‌ಸಿಯ ಅಂತಿಮ ಪಟ್ಟಿಯ ಪ್ರಕಟಣೆಯ ನಂತರ, ಅನ್ಯಾಯವಾಗಿ ಅಥವಾ ತಪ್ಪಾಗಿ ಕೈಬಿಡಲಾದವರಿಗೆ-ಅದು ಅಧಿಕಾರಿಗಳ ತಪ್ಪಿನಿಂದಲೇ ಆಗಿರಲಿ, ಕೋಮುವಾದಿ ಪಕ್ಷಪಾತದಿಂದಲೇ ಆಗಿರಲಿ- ನ್ಯಾಯ ಒದಗಿಸಲು ಒಂದು ಶೀಘ್ರ ಕಾನೂನು ಪ್ರಕ್ರಿಯೆ ಆರಂಭವಾಗಬೇಕು. ಪೌರತ್ವ ದಾಖಲೆಯಿಂದ ಕೈಬಿಡಲಾದ ಮಿಲಿಯಗಟ್ಟಲೆ ಜನರಿಗೆ ಏನು ಆಗಬಹುದು?. ಪೌರರಲ್ಲದ ಅವರ ಸ್ಥಾನಮಾನ ಹಾಗೂ ಹಕ್ಕುಗಳು ಏನು?. ವಿದೇಶಿಗರ ನ್ಯಾಯಮಂಡಳಿಯಿಂದ ವಿದೇಶಿಯರು ಎಂದು ಘೋಷಿತರಾದವರನ್ನು ಬಾಂಗ್ಲಾದೇಶಕ್ಕೆ ಕಳಿಸಲು ಸಾಧ್ಯವಿಲ್ಲ ಎನ್ನುವುದು ಆಗಲೇ ಸ್ಪಷ್ಟವಾಗಿರುವಾಗ- ಅವರನ್ನು ಸ್ವೀಕರಿಸಲು ಬಾಂಗ್ಲಾದೇಶ ನಿರಾಕರಿಸಿದೆ- ಅವರನ್ನು ಬಂಧನ ಕೇಂದ್ರಗಳಲ್ಲಿ ಅನಿರ್ದಿಷ್ಟ ಕಾಲ ಕೊಳೆ ಹಾಕಲಾಗುವುದೇ?.

ಎನ್‌ಆರ್‌ಸಿ ಪ್ರಕ್ರಿಯೆಯನ್ನು ಆರಂಭಿಸಿ ಅದರ ಮೇಲುಸ್ತುವಾರಿ ನೋಡಿಕೊಂಡ ಸುಪ್ರೀಂ ಕೋರ್ಟ್ ಈ ವಿಷಯಗಳಿಗೆ ಪ್ರತಿಕ್ರಿಯಿಸದೆ ನುಣುಚಿಕೊಳ್ಳಲಾಗದು. ಭಾರತೀಯ ನಾಗರಿಕತ್ವ ಮತ್ತು ನಾಗರಿಕರ ಹಕ್ಕುಗಳ ಮೂಲಭೂತ ವಿಚಾರಗಳು ಇಲ್ಲಿ ಅಡಕವಾಗಿವೆ. ಎನ್‌ಆರ್‌ಸಿಯ ದೋಷಪೂರಿತ ಅನುಷ್ಠಾನದಿಂದ ಉದ್ಭವಿಸುವ ಅವಾಂತರಗಳನ್ನು ಪರಿಹರಿಸಲು ವಿಫಲವಾದರೆ ಅದು ಪೌರರ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಮನಾಗುತ್ತದೆ. ಇದರಿಂದ ಭಾರತ ಒಂದು ಪ್ರಜಾಪ್ರಭುತ್ವ ಮತ್ತು ಕಾನೂನು ಪಾಲಿಸುವ ಸಮಾಜ ಎಂಬ ಘನತೆಗೆ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಕಳಂಕ ಬರುತ್ತದೆ.

ಅಂತಿಮ ಪಟ್ಟಿ ಪ್ರಕಟಣೆಯ ಜುಲೈ 31ರ ಗಡುವು ಸಮೀಪಿಸುತ್ತಿರುವಾಗ ಇಂಥ ಸನ್ನಿವೇಶ ಇರುವ ಹೊತ್ತಿನಲ್ಲೇ ಕೇಂದ್ರ ಸರಕಾರ ಮತ್ತು ಅಸ್ಸಾಂ ರಾಜ್ಯ ಸರಕಾರ ಹಠಾತ್ತನೆ ಒಂದು ಹೊಸ ಬೇಡಿಕೆಯೊಂದಿಗೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ. ಅಂತಿಮ ಪಟ್ಟಿ ಪ್ರಕಟಣೆಯ ಗಡುವನ್ನು ಜುಲೈ 31ರಿಂದ ಬೇರೊಂದು ದಿನಾಂಕ್ಕೆ ಮುಂದೂಡಬೇಕೆನ್ನುವುದೇ ಆ ಬೇಡಿಕೆಯಾಗಿದೆ. ಈ ನಡುವೆ, 2018ರ ಜುಲೈ 30ರಂದು ಪ್ರಕಟಿಸಲಾದ ಎನ್‌ಆರ್‌ಸಿ ಕರಡಿನಲ್ಲಿರುವ ಹೆಸರುಗಳ ಸ್ಯಾಂಪಲ್ ಪುನರ್-ದೃಢೀಕರಣ ಆಗಬೇಕೆಂಬುದು ಅವುಗಳ ಬೇಡಿಕೆ. ಬಾಂಗ್ಲಾದೇಶದ ಗಡಿಗೆ ಹೊಂದಿರುವ ಜಿಲ್ಲೆಗಳ ಶೇಕಡಾ ೨೦ರಷ್ಟು ಹಸರುಗಳ ಮರು-ದೃಢೀಕರಣ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇಕಡಾ ೧೦ ಮರು-ದೃಢೀಕರಣ ಆಗಬೇಕು ಎಂದು ಅವು ಹೇಳಿವೆ.

ದುರುದ್ದೇಶಪೂರಿತವಾದ ಈ ಮನವಿಯು ಈಗಾಗಲೇ ಪದೇ ಪದೇ ವಿಚಾರಣೆಗಳು ಮತ್ತು ದಾಖಲೆಪತ್ರಗಳ ಸಲ್ಲಿಕೆಗಳಿಂದ ಹೈರಾಣವಾಗಿರುವ ಲಕ್ಷಾಂತರ ನಾಗರಿಕರಿಗೆ ಮತ್ತಷ್ಟು ಕಿರುಕುಳ ಮುಂದುವರಿಸಲು ಕಾರಣವಾಗುತ್ತದೆ.

ಈ ಕ್ರಮವನ್ನು ದೃಢವಾಗಿ ವಿರೋಧಿಸಬೇಕು. ಪೌರತ್ವ ಕಾನೂನಿಗೆ ತಿದ್ದುಪಡಿ ತರು ವರೆಗೆ ಅಥವಾ ಬಾಂಗ್ಲಾದೇಶದ ಹಿಂದೂ ವಲಸಿಗರಿಗೆ ನಾಗರಿಕತ್ವ ನೀಡುವವರೆಗೆ ಎನ್‌ಆರ್‌ಸಿಯನ್ನು ಅಂತಿಮಗೊಳಿಸುವುದನ್ನು ವಿಳಂಬ ಮಾಡುವುದು ಮೋದಿ ಸರಕಾರ ಉದ್ದೇಶ ಎಂದು ನಂಬಲು ಬೇಕಷ್ಟು ಕಾರಣಗಳಿವೆ. ಕೋಮುವಾದದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವ ಕ್ರಮ ಅಸಂವಿಧಾನಿಕವಾದುದು ಹಾಗೂ ವಿಭಜನಕಾರಿ ಯಾದುದು.

ಪ್ರಕಾಶ್ ಕಾರಟ್
ಅನು: ವಿಶ್ವ

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.

ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು

Published

on

ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಾಲ್ಕು ವರ್ಷಗಳ ನಕಲಿ ಸೇವಾ ಪ್ರಮಾಣಪತ್ರ ತಯಾರಿಸಿಕೊಂಡ ಕೂಡ್ಲಿಗಿ ತಾಲ್ಲೂಕಿನ ಸೂಲದಹಳ್ಳಿ ಅಗ್ರಹಾರ ಗ್ರಾಮದ ಎಸ್.ಸಿದ್ಧನಗೌಡ ಎಂಬ ಅತಿಥಿ ಉಪನ್ಯಾಸಕನ ಮೇಲೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರು ಕೂಡ್ಲಿಗಿ ನಗರದ ಪೋಲಿಸ್ ಠಾಣೆಯಲ್ಲಿ ಐ.ಪಿಸಿ ಸೆಕ್ಷನ್ 1860 ಕಲಂ 420, 465, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಎಸ್.ಸಿದ್ಧನಗೌಡ ಅವರು ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು 2023ನೇ ಸಾಲಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕನ್ನಡ ಉಪನ್ಯಾಸಕರಾಗಿ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಆಯ್ದುಕೊಂಡು ಸೇವೆಗೆ ವರದಿ‌ ಮಾಡಿಕೊಂಡಿದ್ದರು. ಇವರ ಸೇವೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಮಾಹಿತಿ ಪಡೆದು, ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನ‌ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರ ವಿರುದ್ಧ ಲೋಕಾಯುಕ್ತಾಗೆ ದೂರು ನೀಡಿದ್ದರು.

ವಿಚಾರಣೆಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯವು ಪ್ರಾಂಶುಪಾಲರಿಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಕಲಿ ಸೀಲು, ನಕಲಿ‌ ಪ್ರಮಾಣಪತ್ರ ಸಿದ್ಧಪಡಿಸಿಕೊಂಡ ಎಸ್.ಸಿದ್ಧನಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೋಲಿಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ24 hours ago

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ...

ದಿನದ ಸುದ್ದಿ2 days ago

ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು

ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ...

ದಿನದ ಸುದ್ದಿ2 days ago

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ...

ದಿನದ ಸುದ್ದಿ3 days ago

ರಾಜ್ಯದೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ

ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಮುಸ್ಲಿಂ ಬಾಂಧವರಿಗೆ...

ದಿನದ ಸುದ್ದಿ3 days ago

ಮುಹಮ್ಮದ್ ಎಂಬ ಮಹೋನ್ನತ ಮಾದರಿ

ಯೋಗೇಶ್ ಮಾಸ್ಟರ್ ಮನುಷ್ಯನ ಎಲ್ಲಾ ವ್ಯವಹಾರಗಳೂ ನಡೆಯುವುದು ಅವನ ಮನಸ್ಸಿನ ಮೂಲಕ. ಮಾಡುವಂತಹ ಆಲೋಚನೆಗಳು, ತೆಗೆದುಕೊಳ್ಳುವಂತಹ ನಿರ್ಧಾರಗಳು, ತೋರುವಂತಹ ವರ್ತನೆಗಳು, ವ್ಯಕ್ತಿಯ ಬಲ, ದೌರ್ಬಲ್ಯ, ಸನ್ನಡತೆ, ದುರ್ನಡತೆ;...

ದಿನದ ಸುದ್ದಿ3 days ago

ದಾವಣಗೆರೆ | ಗೃಹಲಕ್ಷ್ಮೀ ಯೋಜನೆಗೆ ತಾಲ್ಲೂಕುವಾರು ಹೆಲ್ಪ್ ಡೆಸ್ಕ್

ಸುದ್ದಿದಿನ,ದಾವಣಗೆರೆ:ಗೃಹಲಕ್ಷ್ನೀ ಯೋಜನೆಯಡಿ ನೊಂದಣಿಯಾಗಿ ಸಹಾಯಧನ ಪಾವತಿಯಾಗದೇ ಇರುವ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು ತಾಲ್ಲೂಕುವಾರು ಶಿಶು ಅಭಿವೃದ್ದಿ ಯೋಜನಾ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ...

ದಿನದ ಸುದ್ದಿ3 days ago

ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ

ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ...

ದಿನದ ಸುದ್ದಿ3 days ago

ಕಲ್ಯಾಣ ಕರ್ನಾಟಕ ; ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು...

ದಿನದ ಸುದ್ದಿ3 days ago

ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ

ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಯೋಜನೆಗಳ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ...

ದಿನದ ಸುದ್ದಿ3 days ago

ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಸುದ್ದಿದಿನಡೆಸ್ಕ್:ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ನೆಪದಲ್ಲಿ ಪ್ರಚಾರ ಗಿಟ್ಟಿಸಿದ ರಾಜ್ಯಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ...

Trending