ದಿನದ ಸುದ್ದಿ

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

Published

on

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.

18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version