Connect with us

ದಿನದ ಸುದ್ದಿ

ಒಡಿಶಾದ ಸಿಎಂ ಆಗಿ ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ ಪ್ರಮಾಣ ವಚನ

Published

on

ಸುದ್ದಿದಿನಡೆಸ್ಕ್: ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ, ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರ ಉಪಸ್ಥಿತಿಯಲ್ಲಿ ಭುವನೇಶ್ವರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನನ್ನು ಆಯ್ಕೆ ಮಾಡಲಾಯಿತು.

ಭುವನೇಶ್ವರದ ಜನತಾ ಮೈದಾನದಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಂಝಿ, ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಒಡಿಶಾ ರಾಜ್ಯಪಾಲರಾದ ರಘುಬರ್ ದಾಸ್ ಅವರು, ನೂತನ ಮುಖ್ಯಮಂತ್ರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. 147 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬಹುಮತ ಗಳಿಸಿದೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದಲ್ಲಿ ಬಿಜು ಜನತಾ ದಳದ 24 ವರ್ಷಗಳ ಆಡಳಿತ ಈ ಮೂಲಕ ಕೊನೆಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ 10ಕ್ಕೆ ಡಾ. ಬಿ.ಆರ್.‌ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಜಯದೇವ ವೃತ್ತ, ಅಶೋಕ ರಸ್ತೆ, ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರು

ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಮಾತನಾಡಿ, ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿ ದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.

ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

Published

on

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ.

ದಾವಣಗೆರೆಯ ಪೊಲೀಸ್ ಇಲಾಖೆಯ ಹೆಮ್ಮೆಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ಪುರಸ್ಕøತರಾದ ಎಚ್. ದಾದಾಪೀರ್ ಇವರು ಕರ್ನಾಟಕ ರಾಜ್ಯ ತಂಡಕ್ಕೆ ತರಬೇತಿದಾರರಾಗಿದ್ದರು.

ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಹೆಚ್.ದಾದಾಪೀರ್ ಅವರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್ ಆಫ್ ಐರನ್ ಗೇಮ್, ನಗರಸಭೆ ವ್ಯಾಯಾಮ ಶಾಲೆ, ಬೀರೇಶ್ವರ ವ್ಯಾಯಾಮ ಶಾಲೆಗಳ ಎಲ್ಲಾ ಹಿರಿಯ ಮತ್ತು ಕಿರಿಯ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending