ದಿನದ ಸುದ್ದಿ
ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.
ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಲಾಗುವುದು ಹಾಗೂ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಮಾರ್ಗಸೂಚಿಯ ಪ್ರಕಾರ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್‍ರವರಿಗೆ ದೂರು ನೀಡುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ3 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ3 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

