ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243