ದಿನದ ಸುದ್ದಿ
ದಾವಣಗೆರೆ |ಸೆ.27 ರಂದು ಚರ್ಮ ಕುಶಲಕರ್ಮಿಗಳಿಗೆ ಚರ್ಮಶಿಲ್ಪ ಭವನ, ವಸತಿ ಕಾರ್ಯಗಾರ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಸುದ್ದಿದಿನ,ದಾವಣಗೆರೆ:ಸೆ.27 ರಂದು ಬೆಳಿಗ್ಗೆ 10 ಗಂಟೆಗೆ ಆನಗೋಡಿನ ಶ್ರೀಮರುಳಸಿದ್ದೇಶ್ವರ ಸಮುದಾಯ ಭವನ ಇಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚರ್ಮಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ, ಚರ್ಮಶಿಲ್ಪಿ ಭವನ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಂತರ ತ್ಯಾವಣಿಗಿ, ಹುಚ್ಚವ್ವನಹಳ್ಳಿ, ಹುಳುಪಿನಕಟ್ಟೆ ಗ್ರಾಮಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಯಕ್ರಮವನ್ನು ಮುಂದುವರೆಸಲಾಗುವುದು.
ಕಾರ್ಯಕ್ರಮವನ್ನು ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಶಂಕುಸ್ಥಾಪನೆಯನ್ನು ನೆರೆವೇರಿಸುವರು. ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಉಪಸ್ಥಿತರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರಿನಿವಾಸ ಪೂಜಾರಿ ಭಾಗವಹಿಸುವರು. ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಎಂ ಸಿದ್ದೇಶ್ವರ ಸವಲತ್ತು ವಿತರಣೆ ಮಾಡುವರು.
ಮುಖ್ಯ ಅತಿಥಿಗಳಾಗಿ ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಜಿ.ರಘು ಆಚಾರ್, ಆರ್.ಪ್ರಸನ್ನ ಕುಮಾರ್, ಮೋಹನ್ ಕುಮಾರ್ ಕೊಂಡಜ್ಜಿ, ಎಂ.ಪಿ.ರೇಣುಕಾಚಾರ್ಯ, ಹರಿಹರ ಶಾಸಕ ಎಸ್.ರಾಮಪ್ಪ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೆಗೌಡ, ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರುದ್ರೇಶ್, ತ್ಯಾವಣಿಗಿ ಗ್ರಾ.ಪಂ ಅಧ್ಯಕ್ಷರಾದ ಬಿ.ಹೆಚ್ ಹನುಮಮ್ಮ ಗಿಂಡೇರ, ಹುಚ್ಚವ್ವನಹಳ್ಳಿ ಗ್ರಾ.ಪಂ ಅಧ್ಯಕ್ಷರಾದ ಆರ್.ಸಿ.ಗಣೇಶ್, ಆನಗೋಡು ಗ್ರಾ.ಪಂ ಅಧ್ಯಕ್ಷರಾದ ನಸ್ರುಲ್ಲಾ ಭಾಗವಹಿಸುವರು.
ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಡಾ.ಎನ್ ನಾಗಾಂಬಿಕಾದೇವಿ, ಜಿಲ್ಲಾ ಉಸ್ತುವಾತಿ ಕಾರ್ಯದರ್ಶಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಜಯಮಹಾಂತೇಶ ಬಿ.ದಾನಮ್ಮನವರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ನಟರಾಜ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಸಮಾಜ ಕಲ್ಯಾಣ ಇಲಾಖೆಯ ಕೌಸರ್ ರೇಷ್ಮಾ.ಜಿ ಕಾರ್ಯನಿರ್ವಾಹಕ ಅಭಿಯಂತರರು ವೀರಣ್ಣ ಅಂಗಡಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243