ದಿನದ ಸುದ್ದಿ

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ಅವರು (ನ.11) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ (ರಿ) ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ತುಂಗಾಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರವನಿತೆ ಒನಿಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶ, ಸಮಾಜ ಹಾಗೂ ರಾಜ್ಯಕ್ಕಾಗಿ ಯಾರು ತ್ಯಾಗ ಮಾಡುತ್ತಾರೆ, ಅಂತಹವರು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯುತ್ತಾರೆ. ಈ ಹಿನ್ನಲೆಯಲ್ಲಿ ನಮ್ಮ ದೇಶಕ್ಕೆ ಇರುವಂತಹ ಮಹತ್ವ ಇನ್ನೂಂದು ದೇಶಕ್ಕಿಲ್ಲ ಎಂದು ತಿಳಿಸಿದರು.

ಒನಕೆ ಓಬವ್ವ, ರಾಣಿ ಚನ್ನಮ್ಮ, ಅಬ್ಬಕ್ಕ, ಗಾಂಧೀಜಿ, ನೆಹರು, ಬಾಬ ಸಾಹೇಬ್ ಅಂಬೆಡ್ಕರ್ ಇಂತ ಮಹಾನೀಯರು ತಮಗಾಗಿ ಕೆಲಸ ಮಾಡಲಿಲ್ಲ, ಬದಲಾಗಿ ದೇಶಕ್ಕಾಗಿ, ಸಮಾಜಕ್ಕಾಗಿ , ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ್ದರಿಂದ ಇತಿಹಾಸ ಪುಟಗಳಲ್ಲಿ ಅಜಾರಮರವಾಗಿ ಉಳಿದಿದ್ದಾರೆ. ಅದೇ ರೀತಿ ನಾವುಗಳು ಸಮಾಜದ ಒಳಿತಿಗಾಗಿ ಕೆಲಸ ಮಾಡಿದಾಗ ಮಾತ್ರ ಇತಿಹಾಸ ಪುಟಗಳಲ್ಲಿ ಸೇರಲು ಸಾಧ್ಯ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಒನಕೆ ಓಬವ್ವನ ಧೈರ್ಯ, ಶೌರ್ಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಛಲವಾದಿ ಸಮಾಜದ ಮುಂಖಡರಾದ ಎಂ.ಸಿ.ಓಂಕಾರಪ್ಪ ಒನಕೆ ಓಬವ್ವ ತ್ಯಾಗ , ಧೈರ್ಯ, ಸ್ವಾಮಿ ನಿಷ್ಠೆ ಬಗ್ಗೆ ಸವಿಸ್ತರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ, ಹೆಚ್ಚುವರಿ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ದೂಡ ಸದಸ್ಯರಾದ ಗಿರೀಶ್, ಉಪ ಮೇಯರ್ ಸೋಗಿ ಶಾಂತಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದೇಶಕರಾದ ನಾಗರಾಜ್, ಜಿಲ್ಲಾ ಛಲವಾದಿ ಸಮಾಜದ ಮುಂಖಡರಾದ ಜೈ ಪ್ರಕಾಶ್, ಉಪಾಧ್ಯಕ್ಷರಾದ ರುದ್ರಮ್ಮ, ಜಿಲ್ಲಾ ಮಾದಿಗ ಸಮಾಜದ ಮುಂಖಡರಾದ ವೀರಭದ್ರಪ್ಪ, ಹಾಗೂ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version