ದಿನದ ಸುದ್ದಿ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ 2019-20ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆ, ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣಾ ಯೋಜನೆ, ಸ್ಪೂರ್ತಿ ಯೋಜನೆ ಪ್ರಬುದ್ದ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವವರು ಜುಲೈ 31 ರೊಳಗೆ ಆನ್‍ಲೈನ್ ಮೂಲಕ ವೆಬ್‍ಸೈಟ್ www.ksskds.kar.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಗೆ ಅರ್ಜಿಗಳನ್ನು ಮಂಡಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆಯ್ಕೆಯಾದ ಫಲಾನುಭವಿಗಳ ವಿವರಗಳು ಆನ್‍ಲೈನ್‍ನಲ್ಲಿಯೇ ಅನುಮೋದನೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ ದೂ.ಸಂ: 08192-258648ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ11 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ11 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

