ದಿನದ ಸುದ್ದಿ

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ಕಲಬುರಗಿ:ಪ್ರಸಕ್ತ 2020-21ನೇ ಸಾಲಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್‍ಸೈಟ್ ವಿಳಾಸ http://adcl.karnataka.gov.in, , ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ವೆಬ್‍ಸೈಟ್ ವಿಳಾಸ http://adijambava.kar.nic.in, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವೆಬ್‍ಸೈಟ್ ವಿಳಾಸ http://banjarathanda.kar.nic.in

ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವೆಬ್‍ಸೈಟ್ ವಿಳಾಸ http://ksskdc.kar.nic.in ವೆಬ್‍ಸೈಟ್‍ಗಳಿಗೆ ಸಂಪರ್ಕಿಸಬಹುದಾಗಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2020ರ ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472 278660 ಗೆ ಸಂಪರ್ಕಿಸಲು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version