ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಗಳೂರು ತಾಲ್ಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಈ ಕೆಳಗಿನ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ (ಬಿಸಿಡಬ್ಲೂಡಿ1936) ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-1 (ಬಿಸಿಡಬ್ಲೂಡಿ1937), ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-2 (ಬಿಸಿಡಬ್ಲೂಡಿ1938)-ಜಗಳೂರು ಟೌನ್, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ (ಬಿಸಿಡಬ್ಲೂಡಿ1939)-ಕಮಂಡಲಗೊಂದಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ (ಬಿಸಿಡಬ್ಲೂಡಿ1940)-ಪಲ್ಲಾಗಟ್ಟೆ ಈ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ನೀಡಲಾಗುವುದು.
ಆಸಕ್ತರು www.bcwd.karnataka.gov.in & https://karepass.cgg.gov.in/ ಈ ವೆಬ್‍ಸೈಟ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅಥವಾ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳಾದಲ್ಲಿ bcwd.hostels@karnataka.gov.in ಅಥವಾ
ತಾಲ್ಲೂಕು ಹಿಂದುಳಿದ ವರ್ಗಗಳ ಕಚೇರಿ ಜಗಳೂರು ಇಲ್ಲಿ ಸಂಪರ್ಕಿಸುವುದು.
ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾರ್ಥಿ ನಿಲಯಕ್ಕೆ ಕೋವಿಡ್ ಪರೀಕ್ಷೆಯ ವರದಿಯನ್ನು ಫೆ.10ರೊಳಗೆ ಪಡೆದಿಟ್ಟುಕೊಂಡಿರಬೇಕು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243