ದಿನದ ಸುದ್ದಿ
ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನೀಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಇಲ್ಲಿ ಅರ್ಜಿ ಸಲ್ಲಿಸುವುದು. ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಡಿ.ದೇವರಾಜ ಅರಸು ಭವನ, ಬೈಪಾಸ್‍ರಸ್ತೆ, ವಿದ್ಯಾನಗರ, ಶಿವಮೊಗ್ಗ. ದೂ ನಂ. 08082-240078 ನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243