ದಿನದ ಸುದ್ದಿ

ಪದವಿಪೂರ್ವ ಕಾಲೇಜ್‌ಗಳನ್ನು ಆರಂಭಿಸಲು ಆನ್‌ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ,ಧಾರವಾಡ : 2019-20ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳು, ಟ್ರಸ್ಟ್ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಯಮಗಳನ್ವಯ ಆನಲೈನ್ ಮೂಲಕ ಅರ್ಜಿ ನಮೂನೆ-1 ರಲ್ಲಿ ಮಾರ್ಚ್ 21ರೊಳಗಾಗಿ ಅರ್ಜಿ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ನಿರ್ದೆಶನಾಲಯ ಜಂಟಿ ನಿರ್ದೆಶಕರು ಬೆಂಗಳೂರು ಇವರಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ನಮೂನೆ, ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ http://pue.kar.nic.in/PUE/support_html/examination.htm
ಮೂಲಕ ಪಡೆಯಬಹುದಾಗಿದೆ.

ಪದವಿ ಪೂರ್ವ ಕಾಲೇಜ್‌ಗಳನ್ನು ಪ್ರಾರಂಭಿಸಲು ಉದ್ದೇಶಿಸಿ 2017-18ಮತ್ತು 2018-19ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಕಾಲೇಜ್ ಮಂಜೂರಾತಿ ಆದೇಶವನ್ನು ಪಡೆಯದೇ ಇರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಟ್ರಸ್ಟ್ಗಳು ಪ್ರಸ್ತುತ ಪರಿಷ್ಕೃತ ದರದ ವ್ಯತ್ಯಾಸದ ಮೊತ್ತವನ್ನು ಪಾವತಿಸಿದ ಚಲನ್‌ನೊಂದಿಗೆ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಮತ್ತೊಮ್ಮೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

2019-20 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿಪೂರ್ವ ಕಾಲೇಜ್‌ಗಳನ್ನು ಆರಂಭಿಸಲು ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ, ಟ್ರಸ್ಟ್ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version