ದಿನದ ಸುದ್ದಿ

ವಿವಿಧ ವೃತ್ತಿಪರ ಕೋರ್ಸುಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶ

Published

on

ಸುದ್ದಿದಿನ, ಬೆಂಗಳೂರು : ಸಿಇಟಿ-2020 ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು‌ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ.

ಮೇ 8‌ ರಿಂದ ಮೇ 18 ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮತ್ತು ಶುಲ್ಕವನ್ನು ಪಾವತಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಲು ಸೂಚಿಸಿದೆ.

ಮಾಹಿತಿ ಮಾರ್ಪಡಿಸಲು

ಸಿಇಟಿ-2020ರ ಸಂಬಂಧ, ಅರ್ಜಿಗಳಲ್ಲಿನ ಮಾಹಿತಿಗಳನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20 ರಿಂದ ದಿನಾಂಕ ಮೇ 22 ಸಂಜೆ 6:00 ರ ವರೆಗೆ ಅವಕಾಶ ಕಲ್ಪಿಸಲಾಗುವುದೆ. ಅಭ್ಯರ್ಥಿಗಳು ಅನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಾಡಿಸಿಕೊಳ್ಳಬಹುದಾಗಿದೆ ಎಂದು ಕೆಇಎ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version