ದಿನದ ಸುದ್ದಿ

ರಿಯಾಯಿತಿ ಬಸ್‍ಪಾಸ್ ಪಡೆಯಲು ಆನ್‍ಲೈನ್ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನು ಇದೀಗ ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದ್ದು, ವಿವಿಧ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿ ಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ಯ್ರ ಹೋರಾಟಗಾರರ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪತಿ/ ಪತ್ನಿಯರ ಉಚಿತ ಕೂಪನ್ಸ್ ಮತ್ತು ಅಪಘಾತ ಪರಿಹಾರ ನಿಧಿ ಈ ಸೇವೆಗಳನ್ನು ಸೇವಾ ಸಿಂಧು ಪೋರ್ಟಲ್ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.

ಫಲಾನುಭವಿಗಳು ಬಸ್‍ಪಾಸ್ ನವೀಕರಿಸಿಕೊಳ್ಳಲು ಮತ್ತು ಹೊಸಪಾಸ್ ಪಡೆದುಕೊಳ್ಳಲು ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಹಾಗೂ ಅರ್ಜಿಗೆ ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು. ಹಾಗೂ ಭೌತಿಕವಾಗಿ ಬಸ್‍ಪಾಸ್ ಪಡೆಯಲು ಬಂದಾಗ ಅಗತ್ಯ ದಾಖಲಾತಿ ಹಾಗೂ ಅದರ ಜೆರಾಕ್ಸ್ ಪ್ರತಿಯನ್ನು ಕಚೇರಿಗೆ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಕ.ರಾ.ರ.ಸಾ.ನಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version