ದಿನದ ಸುದ್ದಿ

ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಕೇಂದ್ರದಲ್ಲಿ 2021-22 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 10 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಇ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ ಆಪರೇಟರ್ ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಕನ್ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್- ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ತರಬೇತಿ ನಿಡಲಾಗುವುದು. ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜು.30 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22ಸಿ & ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ ಹರಿಹರ. ಫೋನ್.08192-243937/296840, 9916908111, 8884488202, 8711913947 ಇವರಿಗೆ ಸಂಪರ್ಕಿಸಬಹುದು ಎಂದು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version