ದಿನದ ಸುದ್ದಿ
ಕಿರು ಪರೀಕ್ಷೆಯಲ್ಲಿ ತೆರೆದ ಪುಸ್ತಕದ ಪರೀಕ್ಷೆ: ಮಹೇಶ್

ಸುದ್ದಿದಿನ ಡೆಸ್ಕ್: ವಾರ್ಷಿಕ ಪರೀಕ್ಷೆ ಹೊರತುಪಡಿಸಿ ಕಿರು ಪರೀಕ್ಷೆಗಳು, ಕ್ಲಾಸ್ ಟೆಸ್ಟ್‍ಗಳಲ್ಲಿ ತೆರೆದ ಪುಸ್ತಕ ಪದ್ಧತಿ ಅನುಸರಿಸಲು ಶಿಕ್ಷಣ ಇಲಾಖೆ ಅನುಮತಿ ಕಾಯಬೇಕಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ತಿಳಿಸಿದ್ದಾರೆ.
ಯಳಂದೂರು ತಾಲೂಕಿನ ಮೇಟಳ್ಳಿಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೆರೆದ ಪುಸ್ತಕ ಪರೀಕ್ಷೆ ನಡೆಸುವುದರಿಂದ ಮಕ್ಕಳಲ್ಲಿ ಸ್ವಂತಿಕೆ ಹುಟ್ಟುತ್ತದೆ. ಪಠ್ಯ ಪುಸ್ತಕಗಳನ್ನು ಓದುತ್ತಾರೆ. ಪರೀಕ್ಷೆ ಎಂದರೆ ಬರೆ ನೆನಪಿನಲ್ಲಿಟ್ಟುಕೊಂಡು ಬರೆಯುವುದಲ್ಲ ಎಂಬುದು ಮಕ್ಕಳಿಗೆ ಅರ್ಥವಾಗುತ್ತದೆ. ಶಿಕ್ಷಣ ವ್ಯವಸ್ಥೆ ಸುಧಾರಿಸುತ್ತದೆ ಎಂದು ಮಹೇಶ್ ತಿಳಿಸಿದರು.
ತೆರೆದ ಪುಸ್ತಕ ಪರೀಕ್ಷೆಗಳು ಹೊರ ದೇಶಗಳಲ್ಲೂ ಇದೆ. ಹಾಗಂತ ಅಲ್ಲಿನ ಮಕ್ಕಳ ದಡ್ಡರಾಗಿಲ್ಲ. ಸಮಾಜ ಅದನ್ನು ಸ್ವೀಕರಿಸಬೇಕಷ್ಟೆ ಎಂದು ಅವರು ಹೇಳಿದರು.

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ7 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ