Connect with us

ದಿನದ ಸುದ್ದಿ

ಬಹಿರಂಗ ಪ್ರಚಾರ ; ಸೋಮವಾರ ಅಂತ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ನಾಲ್ಕು ದಿನ ಬಾಕಿಯಿದ್ದು ಪ್ರಚಾರಕಾರ್ಯ ಪರಾಕಾಷ್ಠೆ ತಲುಪಿದೆ.

ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ. ನಂತರ ಮನೆ-ಮನೆಗೆ ತೆರಳಿ ಮತ ಯಾಚಿಸಲು ಅವಕಾಶವಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ವಿವಿಧ ಪಕ್ಷಗಳ ತಾರಾ ಪ್ರಚಾರಕರು ರಾಜ್ಯದ ಉದ್ದಗಲಕ್ಕೂ ಬಿರುಸಿನ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಳ್ಳಾರಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಸಂಜೆ ತುಮಕೂರಿನಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗದಗ – ಬೆಟಗೇರಿ ಅವಳಿ ನಗರದಲ್ಲಿ ಗದಗ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಮೈಸೂರಿನ ವರುಣ ಕ್ಷೇತ್ರದ ಅಭ್ಯರ್ಥಿ ಹಾಗೂ ಟಿ ನರಸಿಪುರ ಕ್ಷೇತ್ರದ ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿದರು.

ಮತ್ತೊಬ್ಬ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ರೋಡ್ ಷೋ ನಡೆಸಿ ಪಕ್ಷದ ಪರವಾಗಿ ಮತಯಾಚಿದರು. ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರುಗಳು ಕಳೆದ ಕೆಲ ದಿನಗಳಿಂದ ರಾಜ್ಯದ ಉದ್ದಗಲಕ್ಕೂ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿವಾಜಿನಗರದಲ್ಲಿ ನಾಳೆ ರ್‍ಯಾಲಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜೆಡಿಎಸ್ ಪಕ್ಷದ ವತಿಯಿಂದ ಪಕ್ಷದ ಹಿರಿಯ ಧುರೀಣ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗಾರರ ಜೊತೆ ಮಾತನಾಡಿ, ನಾಳೆ ಮತ್ತು ನಾಡಿದ್ದು ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಿದರು.

ಭಾನುವಾರ ನೀಟ್ ಪರೀಕ್ಷೆ ಇರುವುದರಿಂದ ಪ್ರಧಾನಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಭಾನುವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರೇ ತಲುಪಿಸುತ್ತಾರೆ. ಈ ಕುರಿತಂತೆ ಪೊಲೀಸ್ ಮತ್ತು ಎಸ್‌ಪಿಜಿ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಇಂದು 10 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್‌ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ವರೆಗೆ ಸುಮಾರು 26 ಕಿಲೋಮೀಟರ್ ಹಾಗೂ ನಾಳೆ ಭಾನುವಾರ ಕೂಡ ರೋಡ್ ಶೋ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಒಂದೇ ದಿನ ರೋಡ್ ಶೋ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆಯಾದ ಕಾರಣ ಎರಡು ದಿನ ರೋಡ್ ಶೋ ನಡೆಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending