ದಿನದ ಸುದ್ದಿ
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಿಬಿಐ ವಶಕ್ಕೆ…!
ಸುದ್ದಿದಿನ ಡೆಸ್ಕ್ : ಐಎನ್‌ಎಕ್ಸ್ ಮೀಡಿಯಾ ಹೌಸ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಿನ್ನೆ ರಾತ್ರಿ ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಆಗಿದ್ದಾರೆ.
ಚಿದಂಬರಂರನ್ನು ಹೊಸದಿಲ್ಲಿಯ ಜೋರ್‌ಭಾಗ್‌ನಲ್ಲಿ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಕರೆದೊಯ್ಯಲಾಗಿದೆ. ನಿನ್ನೆ ಇಡೀ ರಾತ್ರಿ ಚಿದಂಬರಂ ಇಲ್ಲಿಯೇ ಕಳೆಯಬೇಕಾಗಿದೆ. ಇನ್ನು
ವಿಪರ್ಯಾಸ ಎಂದರೆ ಇದೇ ಮುಖ್ಯ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದೇ ಚಿದಂಬರಂ. 2011ರಲ್ಲಿ ಈ ಕಚೇರಿಯನ್ನು ಚಿದಂಬರಂ ಉದ್ಘಾಟಿಸಿದ್ದರು. ಈಗ ಅದೇ ಕಟ್ಟಡದಲ್ಲಿ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
2010ರಲ್ಲಿ ಚಿದಂಬರಂ ಗೃಹ ಸಚಿವರಾಗಿದ್ದಾಗ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣ ಸಂಬಂಧ ಅಮಿತ್ ಶಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಈಗ 2019ರಲ್ಲಿ ಚಿದಂಬರಂ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದಾರೆ. ಕೇಂದ್ರ ಗೃಹ ಸಚಿವರಾಗಿರುವವರು ಅಮಿತ್ ಶಾ.