Connect with us

ದಿನದ ಸುದ್ದಿ

ದಾವಣಗೆರೆ | ಪಡಿತರ ಚೀಟಿದಾರರು ಇ-ಕೆವೈಸಿ ನೋಂದಣಿ ಮಾಡಿಸುವಂತೆ ಸೂಚನೆ ; ಇಲ್ಲದಿದ್ದರೆ ಪಡಿತರ ವಿತರಣೆ ರದ್ದು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಿಸಲು ಈ ತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದ್ದು, ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ. ಇದುವರೆಗೆ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶವಿತ್ತು. ಪ್ರಸ್ತುತ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಬಹುದಾಗಿರುತ್ತದೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಮೂಲ ನ್ಯಾಯಬೆಲೆ ಅಂಗಡಿಗಳಿಗೆ ಬಂದು ಇ-ಕೆವೈಸಿ ಮಾಡಿಸಿರುವುದಿಲ್ಲ. ಆದ್ದರಿಂದ ಅಂತವರಿಗೆ ಅನುಕೂಲವಾಗಲು ಪೋರ್ಟೆಬಿಲಿಟಿಯಲ್ಲಿ ಇ-ಕೆವೈಸಿಯನ್ನು ಮಾಡಲು ಈಗ ಅವಕಾಶ ಕಲ್ಪಿಸಲಾಗಿದೆ.

ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಾವು ವಾಸಿಸುವ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಬೆಳಿಗ್ಗೆ 8.00 ರಿಂದ ರಾತ್ರಿ 8.00 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ. ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಬಯೋ ದೃಢೀಕರಣ ಮಾಡಿಸಬೇಕು.

ಆಧಾರ್ ಸಂಖ್ಯೆ, ಫೋನ್ ನಂಬರ್, ಗ್ಯಾಸ್ ಹೊಂದಿರುವ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಹ ಸಂಬಂಧವನ್ನು ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿಂದ ಪಡಿತರ ವಿತರಣೆ ರದ್ದು ಮಾಡಲಾಗುತ್ತದೆ.

ಆದ್ದರಿಂದ ಜಿಲ್ಲೆಯಲ್ಲಿ ಹಾಲಿ 4,21,577 ಪಡಿತರ ಚೀಟಿಗಳಿದ್ದು, ಅದರಲ್ಲಿ 14,60,150 ಸದಸ್ಯರು ಇರುತ್ತಾರೆ. ಇವರಲ್ಲಿ 12,89,863 ಸದಸ್ಯರು ಈಗಾಗಲೇ ಇ-ಕೆವೈಸಿ ಮಾಡಿಸಿದ್ದು, ಉಳಿದ 1,70,287 ಸದಸ್ಯರು ಇ-ಕೆವೈಸಿ ಮಾಡಿಸಲು ಬಾಕಿ ಇರುವುದರಿಂದ ಬಾಕಿ ಇರುವ ಎಲ್ಲಾ ಪಡಿತರ ಚೀಟಿದಾರರು ಈ ತಿಂಗಳ ಒಳಗಾಗಿ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಇಂದೇ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending