Connect with us

ದಿನದ ಸುದ್ದಿ

ಪಹಣಿಗೆ ಆಧಾರ್ ಜೋಡಣೆ ; ದಾವಣಗೆರೆ ಜಿಲ್ಲೆಗೆ 3 ನೇ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‍ನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ 3 ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶನಿವಾರ ಆನಗೋಡು ಬಳಿಯ ಸೈನ್ಸ್ ಭವನದಲ್ಲಿ ನಡೆದ ಜಿಲ್ಲೆಯ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. 425708 ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ. ಮರಣ, ಭೂ ಪರಿವರ್ತನೆಯಾದ 109955 ಸೇರಿ 535663 ಆಧಾರ್ ಜೋಡಣೆ ಮಾಡುವ ಮೂಲಕ ಶೇ 64.73 ರಷ್ಟು ಆಧಾರ್ ಜೋಡಣೆ ಮಾಡಲಾಗಿದೆ. ಶೇ 80 ರಷ್ಟು ಆಧಾರ್ ಜೋಡಣೆ ಮಾಡಲಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಭೆಯಲ್ಲಿ ಸನ್ಮಾನಿಸಲಾಯಿತು.

ಕೆಲವು ಖಾತೆದಾರರ ಮೂಲ ಮಾಲಿಕರು ಮರಣ ಹೊಂದಿದ್ದು ಅವರ ಹೆಸರಿನಲ್ಲಿಯೇ ಪಹಣಿ ಚಾಲ್ತಿಯಲ್ಲಿರುತ್ತವೆ. ಮುಂದಿನ ದಿನಗಳಲ್ಲಿ ಪೌತಿ ಖಾತೆ ಆಂದೋಲನವನ್ನು ಕೈಗೊಳ್ಳುವ ಮೂಲಕ ಖಾತೆ ಬದಲಾವಣೆ ಮಾಡಿ ಪಹಣಿಗೆ ಆಧಾರ್ ಜೋಡಣೆಯ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ; ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ:ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending