ದಿನದ ಸುದ್ದಿ

ಪಹಣಿಗೆ ಆಧಾರ್ ಜೋಡಣೆ ; ದಾವಣಗೆರೆ ಜಿಲ್ಲೆಗೆ 3 ನೇ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‍ನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ 3 ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶನಿವಾರ ಆನಗೋಡು ಬಳಿಯ ಸೈನ್ಸ್ ಭವನದಲ್ಲಿ ನಡೆದ ಜಿಲ್ಲೆಯ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. 425708 ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ. ಮರಣ, ಭೂ ಪರಿವರ್ತನೆಯಾದ 109955 ಸೇರಿ 535663 ಆಧಾರ್ ಜೋಡಣೆ ಮಾಡುವ ಮೂಲಕ ಶೇ 64.73 ರಷ್ಟು ಆಧಾರ್ ಜೋಡಣೆ ಮಾಡಲಾಗಿದೆ. ಶೇ 80 ರಷ್ಟು ಆಧಾರ್ ಜೋಡಣೆ ಮಾಡಲಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಭೆಯಲ್ಲಿ ಸನ್ಮಾನಿಸಲಾಯಿತು.

ಕೆಲವು ಖಾತೆದಾರರ ಮೂಲ ಮಾಲಿಕರು ಮರಣ ಹೊಂದಿದ್ದು ಅವರ ಹೆಸರಿನಲ್ಲಿಯೇ ಪಹಣಿ ಚಾಲ್ತಿಯಲ್ಲಿರುತ್ತವೆ. ಮುಂದಿನ ದಿನಗಳಲ್ಲಿ ಪೌತಿ ಖಾತೆ ಆಂದೋಲನವನ್ನು ಕೈಗೊಳ್ಳುವ ಮೂಲಕ ಖಾತೆ ಬದಲಾವಣೆ ಮಾಡಿ ಪಹಣಿಗೆ ಆಧಾರ್ ಜೋಡಣೆಯ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version