ದಿನದ ಸುದ್ದಿ
ಪಾಲಯ್ಯ.ಪಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಚಿತ್ರದುರ್ಗ : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಪಂಚಾಯ್ತಿಯ ಮಾರಮ್ಮನಹಳ್ಳಿ ಗ್ರಾಮದ ಪಾಲಯ್ಯ.ಪಿ ಅವರು ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ “ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ದೈವ ಸಂಬಂಧ : ಸಾಂಸ್ಕೃತಿಕ ಅಧ್ಯಯನ“(ಮೊಳಕಾಲ್ಮೂರು ಚಳ್ಳಕೆರೆ ತಾಲ್ಲೂಕುಗಳನ್ನು ಅನುಲಕ್ಷಿಸಿ) ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ಲಭಿಸಿದೆ.
ಕನ್ಮಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಬೇವಿನಕಟ್ಟಿ ರವರ ಮಾರ್ಗದರ್ಶನದಲ್ಲಿ ಪಿಎಚ್. ಡಿ ಮಹಾಪ್ರಬಂಧವನ್ನು ಪಾಲಯ್ಯ ಅವರು ಸಿದ್ಧಪಡಿಸಿ ಮಂಡಿಸಿದ್ದು, ನಾಳೆ ( ಡಿ.8 ರಂದು ) ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯುವ 31ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ(ಡಾಕ್ಟರೇಟ್) ಪದವಿಯನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243