ರಾಜಕೀಯ
ಬೆಂಗಳೂರಿನಲ್ಲಿ ಹೆಬ್ಬಾಳಕರ ವಿರುದ್ಧ ಪರಂ ಗರಂ
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಸದಾಸಿವ ನಗರದ ನಿವಾಸದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಮುಖಂಡರ ಚಹಾ ಕೂಟದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸಮ್ಮಿಶ್ರ ಸರ್ಕಾರ ಈಗಷ್ಟೇ ನೂರು ದಿನ ಪೂರೈಸಿದೆ. ಸಣ್ಣ ವಿಚಾರವನ್ನು ತಮ್ಮ ಪ್ರತಿಷ್ಠೆಗಾಗಿ ದೊಡ್ಡದು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಡಿ.ಕೆ. ಶಿವಕುಮಾರ್ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ತಮ್ಮ ಹೆಸರು ಪ್ರಸ್ತಾಪಿಸಿದ್ದಾರೆ. ನಾನು ಲಕ್ಷ್ಮೀ ಹೆಬ್ಬಾಳಕರ್ ಪರ ನಿಂತಿರುವುದಾಗಿ ತಿಳಿದುಕೊಂಡಿದ್ದಾರೆ. ಆದರೆ, ನಾನು ಯಾರ ಪರವಾಗಿಯೂ ಇಲ್ಲ. ಪಕ್ಷನಿಷ್ಠವಾಗಿ ಕೆಲಸ ಮಾಡುತ್ತೇನೆ. ನನ್ನ ಹೆಸರು ತಂದಿದ್ದು ನನಗೆ ಬೇಸರ ತಂದಿದೆ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401