ದಿನದ ಸುದ್ದಿ
ಮುಖ್ಯಮಂತ್ರಿ ಪರಿಹಾರ ನಿಧಿಗೆ 9 ಕೋಟಿ ರೂಪಾಯಿ ನೀಡಿದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9ಕೋಟಿ ರೂಪಾಯಿ ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಚೆಕ್ ಹಸ್ತಾಂತರಿಸಿದರು. ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ನೀಲಪ್ಪ ಶಿವಣ್ಣನವರ, ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243