Connect with us

ದಿನದ ಸುದ್ದಿ

ನೀರುಗಂಟಿಗಳಿಗೆ ಸಾಮಾಜಿಕ ಭದ್ರತೆ ಕುರಿತು ಸಚಿವರೊಂದಿಗೆ ಚರ್ಚಿಸಿ ಕ್ರಮ : ಪವಿತ್ರ ರಾಮಯ್ಯ

Published

on

ಸುದ್ದಿದಿನ,ದಾವಣಗೆರೆ :ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂಕ್ತ ಸಾಮಾಜಿಕ ಭದ್ರತೆಯ ಅನನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಹೇಳಿದರು.

ದಾವಣಗೆರೆ ತಾಲ್ಲೂಕು ಬೇತೂರು – ಕಾಡಜ್ಜಿ ನಡುವೆ ಬರುವ ಆರ್-4 ವಿತರಣಾ ನಾಲೆಯಲ್ಲಿ ರೈತರೊಂದಿಗೆ ಹಾಗೂ ನೀರು ಗಂಟಿಗಳೊಂದಿಗೆ ಸ್ನೇಹಮಯ ವಾತಾವರಣ ನಿರ್ಮಾಣ ಮಾಡಲು ಹಮ್ಮಿಕೊಂಡಿದ್ದ ಔತಣಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೀರು ಗಂಟಿ ರವಿ ಮತ್ತು ಕುಬೇರ ಅವರು ಮಾತನಾಡಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ಈ ಭಾಗದಲ್ಲಿ ನೀರು ನಿರ್ವಹಣೆ ಹಾಗೂ ನೀರಾವರಿ ಇಲಾಖೆಯ ಅವಶ್ಯಕ ಸೇವೆಯನ್ನು ನಿರ್ವಹಣೆ ಮಾಡಿಕೊಂಡು ಬರುತ್ತಿದ್ದು, ಎಷ್ಟೇ ಪ್ರಯತ್ನ ಪಟ್ಟರು ಇಲ್ಲಿಯವರೆಗೂ ನಮಗೆ ಕನಿಷ್ಠ ಮೂಲಭೂತ ಸೌಕರ್ಯ ದೊರಕದಿರುವುದು ನೋವುಂಟು ಮಾಡಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಖಾಸಗಿ ಕಂಪನಿಗೆ ಗುತ್ತಿಗೆ ನೀಡುವುದನ್ನು ರದ್ದು ಪಡಿಸಿ ನೇರವಾಗಿ ನೀರಾವರಿ ಇಲಾಖೆಯಿಂದ ವೇತನ ನೀಡಬೇಕು ಅಥವಾ ಕನಿಷ್ಟ ವೇತನ ಜಾರಿ ಮಾಡುವಂತೆ ಅಥವಾ 20 ವರ್ಷಕ್ಕಿಂತ ಅಧಿಕ ವರ್ಷಗಳಿಂದ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ಕೆಲಸಕ್ಕೆ ತಗೆದುಕೊಳ್ಳುವಂತೆ ಈ ಸಮಯದಲ್ಲಿ ಒಕ್ಕೊರಲಿನಿಂದ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ನಿಮ್ಮ ನೋವು ಏನು ಎಂಬುದು ನನ್ನ ಅರಿವಿನಲಿದ್ದು, ಈ ಸಂಬಂಧ ಜಲ ಸಂಪನ್ಮೂಲ ಸಚಿವರೊಂದಿಗೆ ಈ ಕುರಿತು ಚರ್ಚಿಸಿ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸ್ಥಳೀಯ ರೈತ ಮುಖಂಡ ಬಸವರಾಜ್ ಮಾತನಾಡಿ, ನೀವು ಕಾಡಾ ಅಧ್ಯಕ್ಷರಾದ ನಂತರ ಬಹಳ ವರ್ಷಗಳಿಂದ ರೈತರು ಅನುಭವಿಸುತ್ತಿದ್ದ ಕಷ್ಟಗಳು ದೂರವಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಾವಣಗೆರೆ ನಂ.01 ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವರಾಜ್, ಭದ್ರಾ ಕಾಡಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗೇಂದ್ರ, ಸಹಾಯಕ ಅಭಿಯಂತರ ಮಹಾಂತೇಶ್, ಶೀಲಾ, ಗೋವಿಂದ್ ರಾಜ್, ಹೆಮೋಜಿ ರಾವ್ ಹಾಗೂ ನೀರು ಬಳಕೆದಾರರ ಸಂಘದ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending