ದಿನದ ಸುದ್ದಿ

ಕರ್ನಾಟಕದಲ್ಲಿ ಮೇಲ್ಮನೆಯ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕದ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾನ ಇಂದು ಶಾಂತಿಯುತವಾಗಿ ನಡೆಯಿತು.

ಪ್ರಾಥಮಿಕ ವರದಿಯಂತೆ ಶೇಕಡ 65ರಷ್ಟು ಮತದಾನವಾಗಿದೆ. ನೀರಸವಾಗಿ ಆರಂಭಗೊಂಡ ಮತದಾನ ಮಧ್ಯಾಹ್ನದ ನಂತರ ಚೇತರಿಕೆ ಕಂಡಿತು ಎಂದು ನಮ್ಮ ಪ್ರತಿನಿಧಿಗಳು ವರದಿ ಮಾಡಿದ್ದಾರೆ.

ಮೈಸೂರು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸಂಸದರು, ಶಾಸಕರು, ಮಠಾಧಿಪತಿಗಳು ಮೊದಲು ಬಂದು ಮತದಾನ ಮಾಡಿದ್ದು, ವಿಶೇಷವಾಗಿತ್ತು. ಬಾಗಲಕೋಟೆಯಲ್ಲಿ ಶಾಂತಿಯುತವಾಗಿ ಮತದಾನ ಮುಕ್ತಾಯವಾಗಿದ್ದು, ಪ್ರಾಥಮಿಕ ವರದಿಯಂತೆ ಶೇಕಡ 55 ರಿಂದ 60 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಶೇಕಡ 60 ರಷ್ಟು ಮತದಾನವಾಗಿದೆ. ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.ಪಶ್ವಿಮ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಶೇಕಡ ೮೨ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ. 4 ಕ್ಷೇತ್ರಗಳ ಮತಗಳ ಎಣಿಕೆ ನಾಡಿದ್ದು ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version