ದಿನದ ಸುದ್ದಿ
ಏ. 11 ರಂದು ನೆಲಮಂಗಲದಲ್ಲಿ ಕೆ ಆರ್ ಎಸ್ ಪಕ್ಷದಿಂದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾದ್ಯoತ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ದ , ಸರ್ಕಾರಿ ಅದಿಕಾರಿಗಳಿಂದ ಪ್ರಾಮಾಣಿಕ ಜನಸೇವೆ , ಹಾಗೂ ನಾಗರಿಕರ ಅಹವಾಲು ಸ್ವೀಕಾರ , ಜನಜಾಗೃತಿ , ಜನಸ್ಪಂದನ , ಕಾರ್ಯಕ್ರಮವು ಇದೇ ತಿಂಗಳ 11 ರಂದು ನೆಲಮಂಗಲ ತಾಲೂಕು ಕಚೇರಿ ಆವರಣದಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾ , ಜಿಲ್ಲೆ ಯ ಹಾಗೂ ನೆಲಮಂಗಲ ತಾಲೂಕಿನ ಮತದಾರರು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೆಲಮಂಗಲ ತಾಲೂಕು ಕಚೇರಿ ಆವರಣದಲ್ಲಿ ಸಹ ನೆಲಮಂಗಲ ತಾಲೂಕು ಘಟಕದ ವತಿಯಿಂದ ಅಧ್ಯಕ್ಷರಾದ ಶ್ರೀ ಯುತ ಅರುಣ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಅವರ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಮತ್ತು ಶ್ರೀ ರಮೇಶ್ ಜಿ ಏನ್ , ರಾಜ್ಯಜಂಟಿ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ – ಕೋಲಾರ ಜಿಲ್ಲಾ ಉಸ್ತುವಾರಿಗಳು ಮತ್ತು ಶ್ರೀ ಸೋಣ್ಣಪ್ಪಗೌಡರು ಬೆಟ್ಟಳ್ಳಿ ಬೆ , ಗ್ರಾ , ಜಿಲ್ಲಾ ಉಸ್ತುವಾರಿಗಳು ಹಾಗೂ ಹೊಸಕೋಟೆ ವಿದಾನಸಭಾ ಕ್ಷೆತ್ರದ ಸಂಭಾವ್ಯ ಅಭ್ಯರ್ಥಿಗಳು ಇವರು ಆತಿಥ್ಯ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವ ವಾಡುತಿದ್ರು, ಅಸಮರ್ಥ 40% ಕಮಿಷನ್ ಸರ್ಕಾರ, ಎಂದು ಕ್ಯಾತಿ ಗಳಿಸಿರುವ ಬಿಜೆಪಿ ಸರ್ಕಾರವನ್ನ , ಪೊಲೀಸ್ ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳು ಏಗಿಲ್ಲದೆ ನಡೆಯುತ್ತಿದ್ರು , ಸರ್ಕಾರಿ ಅಧಿಕಾರಿಗಳು ಸಾಮಾನ್ಯ ಜನರಿಗೆ ಪ್ರಮಾಣಿಕ ಜನಸೇವೆ ಮಾಡದೆ. ವಿಳಂಬ ದೋರಣೆ , ಇಲ್ಲಸಲ್ಲದ ಸಾಬೂಬು ಹೇಳಿ,ಲಂಚಕ್ಕೆ ಬೇಡಿಕೆ , ಇನ್ನಿತರ ಆಮಿಷಗಳನ್ನ ಪಡೆಯಲು ತಿಂಗಳನು ಗಟ್ಟಲೆ , ಒಬ್ಬೊಬ್ಬರಿಗೆ ವರ್ಷನು ಗಟ್ಟಲೆ ಅರ್ಜಿಗಳನ್ನ ಪೆಂಡಿಂಗ್ ಇಟ್ಟಿರುತ್ತಾರೆ.
ಇನ್ನು ನೂರಾರು ತರದ ಸಮಸ್ಸೆ ಗಳು , ಸರ್ಕಾರ ವತಿಯಿಂದ ಸಿಗಬೇಕಾದ , ಯೋಜನೆಗಳು , ಅನುದಾನಗಳು , ಸಿಗುತ್ತಿಲ್ಲ, ಅಭಿವೃದ್ಧಿ ಕೆಲಸಗಳು ತೀರ ಕುಂಟಿತ ಆಗೋಗಿದೆ ಇದನ್ನ ಪ್ರೆಶ್ನೆ ಮಾಡಬೇಕಾದ , ವಿರೋದ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಗಳು ಕಿಂಚಿತ್ತು ಗಮನ ಕೊಡದೆ ರಾಜಿಕೀಯ ಮಾಡಿಕೊಂಡು , ಒಬ್ಬರಿಗೊಬ್ಬರು ಸಂತೆ ಯಲ್ಲಿ ಕಳ್ಳರ ಗುಂಪು ಇದ್ದಾಗೆ , ಈ ಜೆಸಿಬಿ ಪಕ್ಷಗಳು ಒಂದೆ ಮುಖದ ಮೂರು ನಾಣ್ಯಗಳಿದ್ದಂತೆ ಹೆಸರಿಗೆ ಮಾತ್ರ ಮೂರು ಪಕ್ಷಗಳು ಆದ್ರೆ ಎಲ್ಲರು ಒಂದಾಗಿ ರಾಜಿಕೀಯ ಮಾಡಿಕೊಂಡು ಸಾರ್ವಜಕರಿಗೆ ಸರಿಯಾದ ಸೇವೆ ಕೊಡದೆ ಮುಂದಿನ ವರ್ಷದ ಚುನಾವಣೆಗೆ ಗಮನ ಕೊಟ್ಟು ಅಭಿವೃದ್ಧಿಯನ್ನ ಮಾಡದೆ ಈಗಿನಿಂದಲೇ ಚುನಾವಣಾ ಬ್ಯುಸಿ ಯಲ್ಲಿದ್ದಾರೆ. ಇದನ್ನ ಜನಸಾಮಾನ್ಯರು ಗಂಭೀರ ವಾಗಿ ಯೋಚಿಸಬೇಕಿದೆ ಎಂದು ತಿಳಿಸಲಾಗಿದೆ.
ಇದನ್ನ ಮನಗಂಡ KRS ಪಕ್ಷವು ತಾಲೂಕಿನ ಸಾರ್ವಜನಿಕರಲ್ಲಿ ವಿನಂತಿಸಿ ಕೊಳ್ಳುವುದೇನೆಂದರೆ ಸ್ವಚ್ಚ , ಪ್ರಾಮಾಣಿಕ , ಹಾಗೂ ಪಾರದರ್ಶಕ ವಾದಂತ ಉತ್ತಮ ರಾಜಿಕೀಯ ವ್ಯವಸ್ಥೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪಕ್ಷ ಸೇರ್ಪಡೆ , ಹೋಬಳಿ ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ,ದೇಣಿಗೆ ಸಂಗ್ರಹಣೆ,. ನಡೆಯುತ್ತಿದ್ದು ತಾವುಗಳು ಸಕರಿಸಬೇಕೆಂದು ಮನವಿಮಾಡಿಕೊಳ್ಳುತ್ತಿದೆ.
ಜೊತೆಗೆ ಕೆಲವೇ ತಿಂಗಳುಗಳಲ್ಲಿ ಬರುವ ತಾಲೂಕು ಪಂಚಾಯತ್ (T P) ಹಾಗೂ ಜಿಲ್ಲಾ ಪಂಚಾಯತ್ (Z P) ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬಯಸುವ ಆಸಕ್ತರಿಗೆ ಅಕ್ರಮ ಚುನಾವಣೆ ಪ್ರಚಾರ ಮಾಡದೆ ಮತದಾರರಿಗೆ [ ಹಣ , ತುಂಡು , ಲಿಕ್ಕರ್ , ಕುಕ್ಕರ್ , ಸೇರಿ , ಪಂಚೆ ]ಇನ್ನಿತರ ಅನೇಕ ಆಮಿಷ ಗಳನ್ನ ಒಡ್ಡದೇ ಪ್ರಾಮಾಣಿಕವಾಗಿ ಚುನಾವಣೆ ಎದುರಿಸಲು ಆಸಕ್ತಿಯುಳ್ಳ ವರಿಗೆ ಪಕ್ಷವು ತರಬೇತಿ ನೀಡಿ ಸ್ಪರ್ದಿಸಲು ಅವಕಾಶ ಮಾಡಿ ಕೊಡುತ್ತಿದೆ. ಇಂತಹ ಅವಕಾಶವನ್ನ ತಾಲೂಕಿನ ಹಾಗೂ ಬೆ, ಗ್ರಾ , ಜಿಲ್ಲಾ ನಾಗರಿಕರು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
- ಶ್ರೀ ಅರುಣ್
ಅಧ್ಯಕ್ಷರು
ನೆಲಮಂಗಲ ತಾಲೂಕು ಕ ರಾ ಪ
ಮೊಬೈಲ್ – 9900996717 - ಶ್ರೀ ವೆಂಕಟೇಶ್ ಮೂರ್ತಿ
ಬೆ, ಗ್ರಾ ಜಿಲ್ಲಾ ಅಧ್ಯಕ್ಷರು ಕ ರಾ ಪ
ಮೊಬೈಲ್ – 6360063039
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

